ಬಳ್ಳಾರಿ, ಫೆ.15 – ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ರಿ) ಬಳ್ಳಾರಿ ಜಿಲ್ಲಾ ಸಮಿತಿಯಿಂದ ನಗರದ ಶ್ರೀನಿಧಿ ಲಲಿತಕಲಾ ಸಂಸ್ಥೆಯಲ್ಲಿ ‘ವಂದೇ ಮಾತರಂ’ ಗೀತ ಗಾಯನ ತರಬೇತಿ ಆರಂಭಿಸಲಾಯಿತು. ಗೀತೆಯ 150ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ದೇಶಭಕ್ತಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಿವೃತ್ತ ಅಧಿಕಾರಿ ಚಂದ್ರಕಾಂತ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಗೀತ ವಿದುಷಿ ರಾಜೇಶ್ವರಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಯು. ರಮೇಶ್ ಸೇರಿದಂತೆ ಹಲವು ಗಣ್ಯರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.