ಬಳ್ಳಾರಿ,ಅ.22: ಪ್ರಸ್ತುತ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ಶ್ರೀ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಬುಧವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಡಾ. ರಾಜ್ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯದ ‘ಹೊಂಗಿರಣ’ ಸಭಾಂಗಣದಲ್ಲಿ ಶ್ರೀ ಮಧ್ವಾಚಾರ್ಯರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಹಾಗೂ ಮುಖಂಡರು, ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.