LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಘನ, ದ್ರವ ತ್ಯಾಜ್ಯ ನಿರ್ವಹಣೆ: ನಿಯಮ ಪಾಲನೆಗೆ ಜಿಲ್ಲಾಧಿಕಾರಿಗಳ ಸೂಚನೆ

ಹೊಸಪೇಟೆ (ವಿಜಯನಗರ) : ಘನತ್ಯಾಜ್ಯ ವಸ್ತು ವಿಲೇವಾರಿ ಕುರಿತಂತೆರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ:06/2018ರಲ್ಲಿ ನಗರ ಸ್ಥಳೀಯ ಸಂಸ್ಥೆಗಳು ರಾಷ್ಟಿçÃಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳ ಪಾಲನೆ ಮಾಡುವ ವಿಷಯದ ಕುರಿತು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳು, ಪರಿಸರ ಇಲಾಖೆ ಮತ್ತು ಜಿಲ್ಲಾ ವಾಯುಮಾಲಿನ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳ ಪಾಲನೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಘನ ಘನತ್ಯಾಜ್ಯ ನಿರ್ವಹಣೆ, ಪಾರಂಪರಿಕ ತ್ಯಾಜ್ಯ ನಿರ್ವಹಣೆ, ದ್ರವ ತ್ಯಾಜ್ಯ ನಿರ್ವಹಣೆಯ ಬಗ್ಗೆ ಮಾನ್ಯ ರಾಷ್ಟಿçÃಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳನ್ನು ಪಾಲಿಸುವ ಸಂಬAಧ ನ್ಯಾಯಾಧೀಕರಣಕ್ಕೆ ಸಲ್ಲಿಸಿರುವ ಅಫಿಡೇವಿಟ್‌ನಲ್ಲಿನ ಅಂಶಗಳನ್ನು ನಿಗದಿತ ಸಮಯದೊಳಗೆ ಕಾರ್ಯಗತಗೊಳಿಸುವಲ್ಲಿ ನಿರ್ಲಕ್ಷö್ಯತನ ತೋರಿದಲ್ಲಿ ಅಂತವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಮನೋಹರ್, ನಗರಸಭೆಯ ಪೌರಾಯುಕ್ತರು, ಕಾರ್ಯಪಾಲಕ ಅಭಿಯಂತರರಾದ ನಾಗರಾಜ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವೀರೇಶ್, ಶಿಲ್ಪಾಶ್ರೀ ಹಾಗೂ ಪರಿಸರ ಅಭಿಯಂತರರಾದ ಜಗದೀಶ್ ಮತ್ತು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು