LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ ಅರಂಭ

ಬಳ್ಳಾರಿ,ನ.28ಪ್ರಸ್ತಕ ಸಾಲಿನಲ್ಲಿ ಮುಂಗಾರು ಋತುವಿನ ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ.

ಬೆಲೆ:ಭತ್ತ ಕ್ವಿಂಟಾಲ್‌ಗೆ ರೂ.2300, ರಾಗಿ ಕ್ವಿಂಟಾಲ್‌ಗೆ ರೂ.4290, ಬಿಳಿ ಜೋಳ(ಮಾಲ್ದಂಡಿ) ಕ್ವಿಂಟಾಲ್‌ಗೆ ರೂ.3421, ಬಿಳಿಜೋಳ (ಹೈಬ್ರಿಡ್ ) ಕ್ವಿಂಟಾಲ್‌ಗೆ ರೂ.3371 ನಂತೆ ಖರೀದಿಸಲು ನಿಗದಿಯಾಗಿರುತ್ತದೆ.



ಖರೀದಿ ಕೇಂದ್ರ:ಜಿಲ್ಲೆಯಲ್ಲಿ ಬಳ್ಳಾರಿಯ ಎಪಿಎಂಸಿ, ಮೋಕಾ, ಕುರುಗೋಡು, ಕಂಪ್ಲಿ, ಸಿರುಗುಪ್ಪ, ಕರೂರು ಮತ್ತು ಹಚ್ಚೋಳ್ಳಿ ಸೇರಿದಂತೆ ಒಟ್ಟು 08 ಖರೀದಿ ಕೇಂದ್ರಗಳನ್ನು ಗುರುತಿಸಲಾಗಿದೆ.

 ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈಗಾಗಲೇ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಏಜೆನ್ಸಿಯವರಿಗೆ ಸೂಚನೆ ನೀಡಲಾಗಿದೆ. ಖರೀದಿ ಕೇಂದ್ರ ಮತ್ತು ಉಗ್ರಾಣ ಕೇಂದ್ರಗಳಿಗೆ ಗ್ರೇಡರ್‌ಗಳನ್ನು ನೇಮಿಸಿಕೊಳ್ಳಲಾಗಿದ್ದು, ತರಬೇತಿ ಕಾರ್ಯ ಪ್ರಾರಂಭವಾಗಿದೆ. ಗೋಣಿಚೀಲ, ಸಾಗಾಣಿಕೆ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ.

 ನೋಂದಣಿಗೆ ಎನ್‌ಐಸಿ ತಂತ್ರಾಂಶವನ್ನು ಅಭಿವೃದ್ಧಿಗೊಳಿಸಲಾಗುತ್ತಿದ್ದು, ಮುಂದಿನ ಮೂರು ದಿನಗಳೊಗಾಗಿ ಎಲ್ಲಾ ಖರೀದಿ ಕೇಂದ್ರಗಳನ್ನು ಚಾಲನೆಗೊಳಿಸಿ, ರೈತರ ನೋಂದಣಿ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು