Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕಮರ್ಷಿಯಲ್ ಗ್ಯಾಸ್ ದರ ಶೇ.50ರಿಂದ ಶೇ.60ರಷ್ಟು ಹೆಚ್ಚಳ!

ಹೊಸದಿಲ್ಲಿ, ಮೇ 2 : ವಾಣಿಜ್ಯ ಅನಿಲ ಸಿಲಿಂಡರ್ ದರ ಏರಿಕೆಯ ಬೆನ್ನಲ್ಲೇ ಖಾಸಗಿ ಕಮರ್ಷಿಯಲ್ ಗ್ಯಾಸ್ ದರದಲ್ಲೂ ಭಾರೀ ಏರಿಕೆ ಕಂಡಿದ್ದು, ಶೇ.50ರಿಂದ ಶೇ.60ರಷ್ಟು ಹೆಚ್ಚಳವಾಗಿದೆ.

ನಿನ್ನೆ ಸರ್ಕಾರಿ ವಾಣಿಜ್ಯ ಅನಿಲ ದರವನ್ನು ಹೆಚ್ಚಿಸಿದ ಬಳಿಕ, ಇದೀಗ ಖಾಸಗಿ ಕಂಪನಿಗಳೂ ದರ ಏರಿಕೆ ಮಾಡಿದ್ದು, ಕಂಪನಿಗಳಿಗನುಸಾರವಾಗಿ ದರಗಳು ಇಂದಿನಿಂದಲೇ ಜಾರಿಯಾಗಿವೆ.

17 ಕೆಜಿ ಖಾಸಗಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 4,500 ರೂಪಾಯಿಗೆ ಏರಿಕೆಯಾಗಿದೆ. ಜ್ಯೋತಿ ಗ್ಯಾಸ್, ಟೋಟಲ್ ಎನರ್ಜೀಸ್, ಸೂಪರ್ ಗ್ಯಾಸ್ ಸೇರಿದಂತೆ ಬಹುತೇಕ ಖಾಸಗಿ ಅನಿಲ ಪೂರೈಕೆ ಸಂಸ್ಥೆಗಳ ದರಗಳು ಹೆಚ್ಚಾಗಿವೆ.

ನಿನ್ನೆವರೆಗೆ ಸುಮಾರು 2,300 ರೂಪಾಯಿ ಇದ್ದ ಸಿಲಿಂಡರ್ ದರದಲ್ಲಿ ಏಕಾಏಕಿ ಶೇ.50ರಷ್ಟು ಏರಿಕೆ ಕಂಡಿದ್ದು, ಈ ದುಬಾರಿ ಹೆಚ್ಚಳದಿಂದ ವ್ಯಾಪಾರಸ್ಥರು ಸಂಕಷ್ಟಕ್ಕೀಡಾಗಿದ್ದಾರೆ.

ಮೇ 1ರಂದು ವಾಣಿಜ್ಯ ಸಿಲಿಂಡರ್ ದರವನ್ನು 991 ರೂಪಾಯಿ ಹೆಚ್ಚಿಸಲಾಗಿದ್ದು, ಇದರ ಪರಿಣಾಮವಾಗಿ ಹೋಟೆಲ್ ಮತ್ತು ಊಟಗಾರಿಕೆ ಕ್ಷೇತ್ರದಲ್ಲಿ ಬೆಲೆ ಏರಿಕೆ ಆರಂಭವಾಗಿದೆ.

ಹೊರಗೆ ಊಟ ಮಾಡುವುದು ಇನ್ನಷ್ಟು ದುಬಾರಿಯಾಗಿದ್ದು, ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಮೇಲೆ ಹೆಚ್ಚುವರಿ ಭಾರ ಬಿದ್ದಿದೆ. ದೇಶೀಯ ಎಲ್ ಪಿಜಿ ಸಿಲಿಂಡರ್ ದರದಲ್ಲೂ 40ರಿಂದ 50 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ.

ಈಗಾಗಲೇ ಸಿಲಿಂಡರ್ ದರ 1,000 ರೂಪಾಯಿಯ ಸಮೀಪದಲ್ಲಿದ್ದು, ಮತ್ತಷ್ಟು ಏರಿಕೆ ಕಂಡರೆ ಸಾಮಾನ್ಯ ಕುಟುಂಬಗಳ ಅಡುಗೆ ವೆಚ್ಚ ಹೆಚ್ಚಾಗಲಿದೆ.

ಅನಿಲ ದರ ಏರಿಕೆಯಿಂದ ಗೃಹಿಣಿಯರಿಗೂ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ. ಅನೇಕ ಕುಟುಂಬಗಳು ಖರ್ಚು ನಿಯಂತ್ರಣಕ್ಕೆ ಪರ್ಯಾಯ ಮಾರ್ಗಗಳತ್ತ ಮುಖ ಮಾಡುವ ಸಾಧ್ಯತೆ ಇದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಳಿತವೂ ಸ್ಥಳೀಯ ಇಂಧನ ದರಗಳ ಮೇಲೆ ಪರಿಣಾಮ ಬೀರುತ್ತಿದೆ. ಇತ್ತೀಚಿನ ಜಾಗತಿಕ ಉದ್ವಿಗ್ನತೆಯ ಪರಿಣಾಮವಾಗಿ ಅನಿಲ ದರ ಏರಿಕೆಯ ಆತಂಕ ಹೆಚ್ಚಾಗಿದೆ.

ಕಮರ್ಷಿಯಲ್ ಸಿಲಿಂಡರ್ ದರ ಏರಿಕೆಯಿಂದ ಹೋಟೆಲ್ ಮಾಲೀಕರು ಸಂಕಷ್ಟಕ್ಕೀಡಾಗಿದ್ದು, ಬೆಂಗಳೂರಿನಲ್ಲಿ ಕಾಫಿ, ತಿಂಡಿ ಮತ್ತು ಊಟದ ದರ ಹೆಚ್ಚಿಸಲು ಮುಂದಾಗಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ