Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕನ್ನಡ ಪರ ಹೋರಾಟಗಾರರಿಗೆ ಸೂಕ್ತ ಸ್ಥಾನಮಾನ ನೀಡಲು ಬದ್ಧ

ಬೆಳಗಾವಿ : ತಾವು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಹುದ್ದೆಗೆ ಸ್ಪರ್ಧಿಸುತ್ತಿದ್ದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರೆ

ರಾಜ್ಯ,ಜಿಲ್ಲೆ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಗಳಲ್ಲಿ ಕನ್ನಡ ಪರ ಹೋರಾಟಗಾರರಿಗೆ ಸೂಕ್ತ ಸ್ಥಾನ ಮಾನಗಳನ್ನು ನೀಡಲು ಬದ್ಧರಾಗಿರುವುದಾಗಿ ಗಡಿ
ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ನಿವೃತ್ತ
ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ ಸೋಮವಾರ
ಕನ್ನಡ ಸಂಘಟನೆಗಳಿಗೆ ಭರವಸೆ ನೀಡಿದರು.
      
ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ಆಯೋಜಿಸಲಾಗಿದ್ದ 25 ಕ್ಕೂ ಅಧಿಕ ಸಮಾನ ಮನಸ್ಕ ಕನ್ನಡ ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ಅವರು,ಕನ್ನಡ ಸಾಹಿತ್ಯ ಪರಿಷತ್ತು ಇಂದು ತಲುಪಿದ ದುಸ್ಥಿತಿಯನ್ನು ನೋಡಿ ತಮಗೆ ತುಂಬ ನೋವಾಗಿದೆ.ಪರಿಷತ್ತಿನ ಘನತೆಯನ್ನು ಮರಳಿ ತಂದು ಕೊಡಲು ತಾವು ನವೆಂಬರ್ ನಲ್ಲಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವುದಾಗಿ ಹೇಳಿದರು.
        
ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷನಾಗಿ ಹಾಗೂ ಸರಕಾರದ ವಿವಿಧ ಹುದ್ದೆಗಳಲ್ಲಿ , ಜಿಲ್ಲಾಧಿಕಾರಿಗಳ ಹುದ್ದೆಯಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಕನ್ನಡದ ಅನುಷ್ಠಾನಕ್ಕೆ ಮಾಡಿದ ಕೆಲಸಗಳನ್ನು ವಿವರಿಸಿದ ಸೋಮಶೇಖರ ಅವರು,ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾದರೆ ಒಬ್ಬ ಕನ್ನಡ ಪರ ಕಾರ್ಯಕರ್ತನಂತೆ ಕೆಲಸ ಮಾಡುವದಾಗಿ ಹೇಳಿದರು.
       
ಬೆಳಗಾವಿಯ ನೆಹರೂ ನಗರದಲ್ಲಿ ಸರಕಾರದ 7 ಕೋಟಿ ರುಪಾಯಿ ಅನುದಾನದಲ್ಲಿ ನಿರ್ಮಿಸಲಾದ ಕನ್ನಡ ಭವನದ ಉಸ್ತುವಾರಿಯನ್ನು ಖಾಸಗಿ ಸಂಘಕ್ಕೆ ನೀಡಲು ತಾವು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರವು ಆದೇಶವಲ್ಲ.ಕನ್ನಡ ಭವನವು ಸರಕಾರದ ಆಸ್ತಿಯಾಗಿದ್ದು ತಮ್ಮ ಸಾಹಿಯುಳ್ಳ ಪತ್ರವು ಆದೇಶವೆಂಬಂತೆ ಬಿಂಬಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು ಈ ಬಗ್ಗೆ ಸ್ಪಷ್ಟನೆ ನೀಡಿ ಸರಕಾರಕ್ಕೆ ಪತ್ರ ಬರೆಯುವುದಾಗಿ ಸೋಮಶೇಖರ ಕನ್ನಡ ಮುಖಂಡರ ಪ್ರಶ್ನೆಗೆ ಉತ್ತರವಾಗಿ ಸ್ಪಷ್ಟಪಡಿಸಿದರು.
       
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸುವ ಸಂಬಂಧ ಕನ್ನಡ ಸಂಘಟನೆಗಳು ಕಳೆದ ನಾಲ್ಕು ತಿಂಗಳಿಂದ ನಡೆಸಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಅವರು,ಈ ಸಂಬಂಧ ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷ ನ್ಯಾ. ಮೂ.ನಾಗಮೋಹನದಾಸ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರಕ್ಕೆ ತಮ್ಮ ಬೆಂಬಲವೂ ಇದೆ ಎಂದರು.
         
ಕಿತ್ತೂರು ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಮಹಾದೇವ ತಳವಾರ, ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ಬಲರಾಮ ಮಾಸೇನಟ್ಟಿ, ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಶಿವಾರೆಡ್ಡಿ ಹುಚ್ಚರೆಡ್ಡಿ, ಸರ್ವೋದಯ ಸಂಘದ ಅಧ್ಯಕ್ಷ ಶ್ರೀನಿವಾಸ ತಾಳೂಕರ, ಸಿದ್ದಲಿಂಗಪ್ಪ, ರೇಖಾ ಯಕ್ಕುಂಡಿ, ಎಸ್.ಎಸ್.ಮೂಕನವರ,
ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜಿದ ಹಿರೆಕೋಡಿ ಮುಂತಾದವರು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಾಹಿತಿಗಳು ಕೇವಲ ಸರಕಾರದ ಪ್ರಶಸ್ತಿ ಮತ್ತು ಹುದ್ದೆಗಳಿಗೆ ಮುಗಿ ಬೀಳುತ್ತಾರೆ. ಆದರೆ ಕನ್ನಡ ಹೋರಾಟಗಳನ್ನು 
ಬೆಂಬಲಿಸಿ ಒಂದು ಹೇಳಿಕೆಯನ್ನು  ಕೊಡುವುದಿಲ್ಲ ಎಂದು ಆರೋಪಿಸಿದರು.
       
ಸಾಹಿತಿ ಅಶೋಕ ಮಲಗಲಿ ಸ್ವಾಗತಿಸಿದರು.ಅಶೋಕ ಚಂದರಗಿ ಪ್ರಾಸ್ತಾವಿಕವಾಗಿ ಮಾತನಾಡಿ ಗಡಿ ಭಾಗಕ್ಕೂ ಸೋಮಶೇಖರ ಅವರಿಗೂ ಇರುವ ಸುದೀರ್ಘ ಸಂಬಂಧವನ್ನು ವಿವರಿಸಿ ನಾಗನೂರು ರುದ್ರಾಕ್ಷಿ ಮಠದಲ್ಲಿ ಸಭೆ ನಡೆಸುವ ಮೂಲಕ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಬೆಂಬಲ ನೀಡುವ ಕುರಿತು
ನಿರ್ಧರಿಸಲಾಗುವುದೆಂದು ತಿಳಿಸಿದರು. ಅಶೋಕ  ಮಲಗಲಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ