Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾಂಗ್ರೆಸ್‌ ಬಿ-ಫಾರಂ ನೀಡಲು ಹಣ ಪಡೆದ ಆರೋಪ: ಬಿಜೆಪಿಯಿಂದ ದೂರು

ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.21: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕಾದರೆ ಅವರಿಂದ ಹಣ ಸಂಗ್ರಹಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿಕೆ ನೀಡಿದ್ದು, ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ಆರೋಪಿಸಿ ಕೇಂದ್ರ ಸಚಿವೆ, ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಅವರು ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿದೂರು ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ಬಿ-ಫಾರಂ ನೀಡುವ ಅಧಿಕೃತ ವ್ಯಕ್ತಿಯೂ ಆಗಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಹಣ ಸಂಗ್ರಹಿಸಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಲಂಚವನ್ನು ಹೊರತುಪಡಿಸಿ ಬೇರೇನೂ ಅಲ್ಲ ಮತ್ತು ಚುನಾವಣಾ ಕಾನೂನುಗಳು ಮತ್ತು ಮಾದರಿ ನೀತಿ ಸಂಹಿತೆಯ ಗಂಭೀರ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಗಮನ ಸೆಳೆಯಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ 2023 ರಲ್ಲಿ ಅಭ್ಯರ್ಥಿಗಳಿಗೆ ಟಿಕೆಕ್ ಕೊಡಲು ಅವರು ಪ್ರತಿ ಆಕಾಂಕ್ಷಿಗಳಿಂದ ಹಣವನ್ನು ಸಂಗ್ರಹಿಸಿದ್ದಾರೆ ಎಂದು ವಿವರಿಸಿದ್ದು, ಕ್ರಮಕ್ಕೆ ಅವರು ವಿನಂತಿಸಿದರು. ಯಾವುದೇ ಚುನಾವಣಾ ಹಕ್ಕನ್ನು ಚಲಾಯಿಸಲು ಯಾರು ಹಣವನ್ನು ನೀಡುತ್ತಾರೆ ಅಥವಾ ತೆಗೆದುಕೊಳ್ಳುತ್ತಾರೆ ಎಂಬುದು  ಲಂಚಕ್ಕೆ ಸಮನಾಗಿರುತ್ತದೆ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ವಿನಂತಿಸಲಾಯಿತು.

ಹಣ ನೀಡಿzವÀರಲ್ಲಿ ಅಭ್ಯರ್ಥಿಯೂ ಸೇರಿದ್ದಾರೆ ಎಂಬುದು ಸ್ಪಷ್ಟವಾಗಿದ್ದು,  ಲಂಚ ನೀಡಿದ ಅಭ್ಯರ್ಥಿಗಳು ಮುಂಬರುವ ಚುನಾವಣಾ ಪ್ರಕ್ರಿಯೆಯಿಂದ ಅನರ್ಹರಾಗುತ್ತಾರೆ. ಹಣವನ್ನು ತೆಗೆದುಕೊಂಡು ಬಿ ಫಾರ್ಮ್ ಕೊಡುವುದು ಕೂಡ ನೀಡುವುದು ಕಾನೂನುಬಾಹಿರವಾಗಿದೆ ಮತ್ತು ಆದ್ದರಿಂದ ಕಾಂಗ್ರೆಸ್ ಪಕ್ಷ / ಡಿ.ಕೆ ಶಿವಕುಮಾರ್ ತನ್ನ ಅಭ್ಯರ್ಥಿಗಳಿಗೆ ನೀಡಿದ ಎಲ್ಲಾ ಬಿ ಫಾರ್ಮ್‍ಗಳು ಅಕ್ರಮದಿಂದ ಕೂಡಿದೆ  ಮತ್ತು ತಿರಸ್ಕರಿಸಲುಬಹುದು. ಈ ಮೂಲಕ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿರುವ 1,350 ಟಿಕೆಟ್ ಆಕಾಂಕ್ಷಿಗಳಿಂದ ಪಕ್ಷ 23 ಕೋಟಿ ಕ್ರೋಡೀಕರಿಸಿದೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಲಂಚ ಪಡೆದು ಕಾಂಗ್ರೆಸ್ ಟಿಕೆಟ್ ನೀಡಿರುವುದು ಸ್ಪಷ್ಟವಾಗಿದೆ ಎಂದು ಮನವಿ ಪತ್ರದಲ್ಲಿ ವಿವರಿಸಲಾಗಿದೆ.

ಹೀಗೆ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷವು ಚುನಾವಣಾ ಹಕ್ಕನ್ನು ಮುಕ್ತವಾಗಿ ಚಲಾಯಿಸುವಲ್ಲಿ ಮಧ್ಯಪ್ರವೇಶಿಸುತ್ತಿದೆ,  ಬಿ ಫಾರಂಗಳನ್ನು ನೀಡುವುದು ಮತ್ತು ಹಣ ಪಡೆದು ಆಕಾಂಕ್ಷಿಗಳಿಗೆ ಟಿಕೆಟ್ ನೀಡುವುದು ಕಾನೂನುಬಾಹಿರ ಮತ್ತು ಕಳಂಕವಾಗಿದೆ. ಆದ್ದರಿಂದ ಈ ಪ್ರಕ್ರಿಯೆಯನ್ನು ಗಮನಿಸಿ ಸೂಕ್ತ ಕ್ರಮಕ್ಕೆ ಕೋರಲಾಯಿತು.

ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಬೇಕಾಗಿದೆ.  ಕಾಂಗ್ರೆಸ್ ಅಧ್ಯಕ್ಷರು ಮತ್ತು ಟಿಕೆಟ್‍ಗಾಗಿ ಲಂಚ ಪಡೆದಿರುವ/ ನೀಡಿದ ಎಲ್ಲ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ವಿನಂತಿಸಲಾಯಿತು. ಚುನಾವಣೆಗಳು ಮತ್ತು ಅಕ್ರಮ ಎಸಗುವ ಮೂಲಕ ನೀಡಲಾದ ಬಿ ಫಾರ್ಮ್‍ಗಳನ್ನು ತಿರಸ್ಕರಿಸಬೇಕು ಹಾಗೂ ನ್ಯಾಯ ಮತ್ತು  ಸೂಕ್ತ  ದಂಡದ ಕ್ರಮಗಳು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳಲು ಕೋರಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ