ಗ್ರಾಮ ಪಂಚಾಯಿತಿ ಕರವಸೂಲಿಗಾರರ ಹುದ್ದೆಗೆ ಮೇ 22ರಂದು ಕಂಪ್ಯೂಟರ್ ಪರೀಕ್ಷೆ
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಇದೇ ಮೇ 22ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ಶಿಕ್ಷಕರ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಕಂಪ್ಯೂಟರ್ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು chitradurga.nic.in ನಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವಾಗ ತಮ್ಮ ಆಧಾರ್ ಕಾರ್ಡ್ ಹಾಗೂ ಆನ್‍ಲೈನ್ ಅರ್ಜಿ ಸಲ್ಲಿಕೆಯ ಸ್ವೀಕೃತಿ ಪ್ರತಿಯನ್ನು ತರುವುದು ಕಡ್ಡಾಯವಾಗಿದೆ.
ನಿಗದಿತ ಸಮಯಕ್ಕೆ ಹಾಜರಾಗದ ಅಭ್ಯರ್ಥಿಗಳನ್ನು ಗೈರು ಹಾಜರಿ ಎಂದು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಯನ್ನು chitradurga.nic.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.