Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳಗಾವಿ: ಶಾಮನೂರು ಶಿವಶಂಕರಪ್ಪಗೆ ಸಂತಾಪ-ಉಭಯ ಸದನಗಳ ಕಲಾಪ ಮುಂದೂಡಿಕೆ

ಬೆಳಗಾವಿ : ವಿಧಾನ ಮಂಡಲದ ಉಭಯ ಸದನಗಳಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸೋಮವಾರ ಸಂತಾಪ ಸೂಚಿಸಿ, ಎರಡೂ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.

ವಿಧಾನಸಭೆಯಲ್ಲಿ ಸಂತಾಪ ಸೂಚನೆ ನಿರ್ಣಯ ಮಂಡಿಸಿ ಮಾತನಾಡಿದ ಸಭಾಧ್ಯಕ್ಷ ಯು.ಟಿ. ಖಾದ‌ರ್, ಎಷ್ಟೇ ಜಟಿಲವಾದ ಸಮಸ್ಯೆಯನ್ನೂ ತಾಳ್ಮೆಯಿಂದ ನಿಭಾಯಿಸುವ ಗುಣ ಶಾಮನೂರು ಅವರಲ್ಲಿತ್ತು. ಅವರ ಜೀವನವೇ ಒಂದು ಸಂದೇಶ' ಎಂದು ಬಣ್ಣಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, 'ದಾವಣಗೆರೆಯನ್ನು ವಿದ್ಯಾಕಾಶಿಯಾಗಿ ರೂಪಿಸುವ ಜೊತೆಗೆ, ಅಲ್ಲಿಗೆ ಬ್ರಾಂಡ್ ಹೆಸರು ತಂದಕೊಟ್ಟವರು ಶಾಮನೂರು ಶಿವಶಂಕರಪ್ಪನವರು' ಎಂದರು.

ವಿರೋಧ ಪಕ್ಷದ ನಾಯಕ ಆರ್, ಅಶೋಕ, ಸಚಿವರಾದ ಕೆ.ಎಚ್‌. ಮುನಿಯಪ್ಪ, ಜಮೀರ್ ಅಹಮದ್ ಖಾನ್, ಬಿಜೆಪಿ ಎಸ್. ಸುರೇಶ್ ಕುಮಾರ್, ಸಿದ್ದು ಸವದಿ, ಆರಗ ಜ್ಞಾನೇಂದ್ರ, ಸಿಮೆಂಟ್ ಮಂಜು, ಕಾಂಗ್ರೆಸ್‌ನ ಯು.ಬಿ. ಬಣಕಾರ, ಜಿ.ಟಿ. ಪಾಟೀಲ, ಶಿವಲಿಂಗೇಗೌಡ, ಅಪ್ಪಾಜಿ ನಾಡಗೌಡ ಮತ್ತಿತರರು ಸಂತಾಪ ಸೂಚನೆ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.

ವಿಧಾನ ಪರಿಷತ್‌ನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಂತಾಪ ಸೂಚನೆ ನಿರ್ಣಯ ಮಂಡಿಸಿದರು. ಸಭಾನಾಯಕ ಎನ್.ಎಸ್. ಬೋಸರಾಜು, ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಚಿವರಾದ ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಬಿಜೆಪಿಯ ಪ್ರದೀಪ ಶೆಟ್ಟರ್, ಸಿ.ಟಿ. ರವಿ, ಎನ್. ರವಿಕುಮಾ‌ರ್, ಜೆಡಿಎಸ್‌ನ ಎಸ್.ಎಲ್. ಭೋಜರಾಜು ಮತ್ತಿತರರು ಶಾಮನೂರು ಶಿವಶಂಕರಪ್ಪ ಅವರಿಗೆ ಸಂತಾಪ ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ