ಶಿವಮೊಗ್ಗದ ಕಾಂಗ್ರೆಸ್ ಮುಖಂಡರುಗಳಿಂದ ನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಇವರಿಗೆ ಅಭಿನಂದನೆ
ಬೆಂಗಳೂರು, ಜೂ. 5: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಇವರನ್ನು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥಗೌಡ ಇವರ ನೇತೃತ್ವದಲ್ಲಿ ಶಿವಮೊಗ್ಗದ ಮುಖಂಡರುಗಳು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ ರಮೇಶ್ ಶಂಕರಘಟ್ಟ. ಕಾಂಗ್ರೆಸ್ ಮುಖಂಡರಾದ ಸುಬ್ಬಣ್ಣ ಮಾಸ್ತಿಕಟ್ಟೆ ಮೊದಲಾದವರು ಇದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.