ಬೆಂಗಳೂರು:
"ಜೆಡಿಎಸ್ ಜೊತೆ ನಾವು ಮೈತ್ರಿ ಮಾಡಿಕೊಂಡು ಅನುಭವ ಪಡೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ಮೈತ್ರಿ ಕಾಂಗ್ರೆಸ್ - ಜೆಡಿಎಸ್ ಮದ್ಯೆ ಆಗುವುದಿಲ್ಲ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಈ ವಿಚಾರವಾಗಿ ಮಾತನಾಡಿದರು. ಉಳಿದಂತೆ ಅವರು ಹೇಳಿದ್ದಿಷ್ಟು;
ಬೊಮ್ಮಾಯಿ ಅವರು ಕೆಆರ್‌ಎಸ್ ಅಣೆಕಟ್ಟಿಗೆ ಭೇಟಿ ನೀಡುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ "ಭೇಟಿ ನೀಡಿದರೆ ಅವರಿಗೂ ವಸ್ತುಸ್ಥಿತಿ ಅರ್ಥವಾಗುತ್ತದೆ. ಆನಂತರ ಕೇಂದ್ರ ಸರ್ಕಾರದ ಬಳಿ ರಾಜ್ಯದ ನೀರಿನ ಪರಿಸ್ಥಿತಿ ವಿವರಿಸಲಿ. ಅವರು ನೀರಿನ ವಿಚಾರದಲ್ಲಿ ರಾಜಕೀಯ ಮಾಡಬಹುದು ಆದರೆ ನಾವು ಮಾಡುವುದಿಲ್ಲ. ನಾವು ನೀರಿನ ವಿಚಾರದಲ್ಲಿ ಯಾವುದೇ ಮುಚ್ಚು ಮರೆ ಮಾಡುವುದಿಲ್ಲ. ಸತ್ಯ ಎಲ್ಲರಿಗೂ ತಿಳಿಯಲಿ" ಎಂದು ತಿಳಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.