LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭ್ರಷ್ಟಾಚಾರ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು: ಎಎಪಿ

ಬೆಂಗಳೂರು: ಭ್ರಷ್ಟಾಚಾರದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಆಮ್ ಆದ್ಮಿ ಪಾರ್ಟಿ ಆಕ್ರೋಶ ವ್ಯಕ್ತಪಡಿಸಿದೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್ ಸರ್ಕಾರದಲ್ಲೂ ಶೇ.40 ಕಮಿಷನ್ ಮುಂದುವರೆದಿದೆ ಎಂದು ಹೇಳಿರುವುದು ಆಘಾತಕಾರಿ ಸಂಗತಿ. ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ, ಹೋರಾಟ ಮಾಡಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅದನ್ನೇ ಮಾಡುತ್ತಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಪೇಸಿಎಂ ಎನ್ನುವ ಅಭಿಯಾನ ಮಾಡಿದ್ದ ಕಾಂಗ್ರೆಸ್, ಚುನಾವಣೆಗೆ ಮುನ್ನ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಭರವಸೆ ನೀಡಿತ್ತು. ಅಧಿಕಾರಕ್ಕೆ ಸಿಕ್ಕ ಬಳಿಕ ಮಾಡುತ್ತಿರುವುದೇನು? ಎಂದು ಪ್ರಶ್ನಿಸಿದ್ದಾರೆ.

ಗುರುವಾರ ಚಾಮರಾಜಪೇಟೆಯ ಗುತ್ತಿಗೆದಾರರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಬಿಬಿಎಂಪಿ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಯಲ್ಲಿಯೂ ಭ್ರಷ್ಟ ಅಧಿಕಾರಿಗಳು ಇದ್ದಾರೆಂದು ಹೇಳಿದ್ದಾರೆ. ಹೀಗಾದರೆ ಅಭಿವೃದ್ಧಿ ಕಾರ್ಯಗಳು ನಡೆಯುವುದು ಹೇಗೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅನಾವಶ್ಯಕ ಪ್ಯಾಕೇಜ್ ಟೆಂಡರ್ ರದ್ದು ಮಾಡುವಂತೆ ಹಲವು ಬಾರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಕೆಂಪಣ್ಣ ಹೇಳಿದ್ದಾರೆ. ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಶಾಸಕರು, ಸಚಿವರ ಕಡೆ ತೋರಿಸುತ್ತಿದ್ದಾರೆ ಎಂದರೆ ಈ ಸರ್ಕಾರ ಇನ್ಯಾವ ರೀತಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಅರ್ಥವಾಗುತ್ತಿದೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದರ ಬಗ್ಗೆ ಗಮನ ಹರಿಸಬೇಕು, ತಾನು ಭ್ರಷ್ಟಾಚಾರ ವಿರೋಧಿ ಎನ್ನುವ ಸಿದ್ದರಾಮಯ್ಯ ಅವರು ಇದರ ಬಗ್ಗೆ ಗಮನ ಹರಿಸಬೇಕು. ಕೂಡಲೇ ಭ್ರಷ್ಟಾಚಾರ ಮಾಡಿರುವ ಅಧಿಕಾರಿಗಳನ್ನು ಅಮಾನತು ಮಾಡಲಿ. ಇದರಲ್ಲಿ ಭಾಗಿಯಾಗಿರುವ ಶಾಸಕ, ಸಚಿವರನ್ನು ವಜಾಗೊಳಿಸಿ ತಮ್ಮ ಸರ್ಕಾರ ಭ್ರಷ್ಟಾಚಾರ ವಿರೋಧಿ ಎನ್ನುವುದನ್ನು ಸಾಬೀತುಪಡಿಸಲಿ ಎಂದು ಒತ್ತಾಯಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರಮಂಜು ಪಾಂಡವಪುರ ನಿರ್ದೇಶನದಲ್ಲಿ " ಮಣ್ಣಿನ ಮಗ ಮಾರ್ಗದರ್ಶಿ " ರೈತ ಸಾಧಕನ ಕುರಿತ ಸಾಕ್ಷಾಚಿತ್ರ