LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಕಾಂಗ್ರೆಸ್​ನ ದುಷ್ಕೃತ್ಯಗಳನ್ನು ಮರೆಮಾಚಲಾಗದು'- ಅಂಬೇಡ್ಕರ್ ವಿವಾದ ಕುರಿತು ಮೋದಿ ತಿರುಗೇಟು

ನವದೆಹಲಿ : ಅಂಬೇಡ್ಕರ್ ಕುರಿತ ಹೇಳಿಕೆಗೆ ವಿಪಕ್ಷಗಳು ಗೃಹ ಸಚಿವ ಅಮಿತ್ ಶಾರನ್ನು ತರಾಟೆಗೆ ತೆಗೆದುಕೊಂಡಿದೆ. ವಿಪಕ್ಷಗಳ ವಿರೋಧದ ನಡುವೆ ಇದೀಗ ಪ್ರಧಾನಿ ನರೇಂದ್ರ ಮೋದಿ ಅಮಿತ್ ಶಾ ಅವರ ಪರ ಬ್ಯಾಟಿಂಗ್‌ ಮಾಡಿದ್ದಾರೆ.

ಕಾಂಗ್ರೆಸ್​ ಹಾಗೂ ಅದರ ಕುತಂತ್ರಗಳು ಹಲವು ವರ್ಷಗಳ ದುಷ್ಕೃತ್ಯಗಳನ್ನು ಮರೆಮಾಚಲಾಗದು ಎಂದು ಪ್ರಧಾನಿ ಮೋದಿ ಟ್ವೀಟ್‌ಗಳನ್ನು ಮಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ಎಲ್ಲದಕ್ಕೂ ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎಂದು ಹೆಸರೆತ್ತುವುದು ಫ್ಯಾಷನ್ ಆಗಿ ಹೋಗಿದೆ. ಇಷ್ಟು ಬಾರಿ ದೇವರ ಹೆಸರನ್ನು ಹೇಳಿದ್ದರೆ, ಏಳು ಜನ್ಮದ ಸ್ವರ್ಗವಾದರೂ ಸಿಕ್ಕಿರುತ್ತಿತ್ತು ಎಂದು ವಿರೋಧ ಪಕ್ಷಗಳ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಈ ವಿಚಾರ ಕುರಿತು ಮೋದಿ ಟ್ವೀಟ್ ಮಾಡಿ, ಅಂಬೇಡ್ಕರ್ ಅವರ ಪರಂಪರೆಯನ್ನು ಅಳಿಸಿಹಾಕಲು ಮತ್ತು ಎಸ್‌ಸಿ, ಎಸ್‌ಟಿ ಸಮುದಾಯಗಳನ್ನು ಅವಮಾನಿಸಲು ಕಾಂಗ್ರೆಸ್​ ಹೇಗೆ ಕುತಂತ್ರಗಳನ್ನು ಮಾಡಿತ್ತೆಂಬುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಎಷ್ಟೇ ಪ್ರಯತ್ನಿಸಿದರೂ ಎಸ್‌ಸಿ/ಎಸ್‌ಟಿ ಸಮುದಾಯಗಳ ವಿರುದ್ಧ ಅತ್ಯಂತ ಭೀಕರ ಹತ್ಯಾಕಾಂಡಗಳು ತಮ್ಮ ಆಡಳಿತದ ಅವಧಿಯಲ್ಲಿ ನಡೆದಿರುವುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್​ ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳನ್ನು ಬಲಪಡಿಸಲು ಏನನ್ನೂ ಮಾಡಲಿಲ್ಲ. ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಜಿ ಅವರು ಡಾ. ಅಂಬೇಡ್ಕರ್ ಅವರನ್ನು ಅವಮಾನಿಸಿದ ಮತ್ತು ಎಸ್‌ಸಿ/ಎಸ್‌ಟಿಯನ್ನು ಕಡೆಗಣಿಸಿದ ಕಾಂಗ್ರೆಸ್‌ನ ಕರಾಳ ಇತಿಹಾಸವನ್ನು ಬಹಿರಂಗಪಡಿಸಿದ್ದಾರೆ.ಅವರು ಹೇಳಿರುವ ಸತ್ಯ ನೋಡಿ ಆತಂಕಕ್ಕೊಳಗಾಗಿ ಅಮಿತ್ ಶಾ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ ಎಂದರು ಹೇಳಿದರು.

ಮಂಗಳವಾರ ರಾಜ್ಯಸಭೆಯಲ್ಲಿ ಭಾರತದ ಸಂವಿಧಾನದ 75 ವರ್ಷಗಳ ವೈಭವದ ಪಯಣ ಎಂಬ ವಿಷಯದ ಕುರಿತು ಎರಡು ದಿನಗಳ ಚರ್ಚೆಗೆ ಉತ್ತರಿಸಿದ ಅಮಿತ್ ಶಾ ಅವರು ಮಂಗಳವಾರ ತಮ್ಮ ಭಾಷಣದಲ್ಲಿ ಬಾಬಾಸಾಹೇಬರನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಆರೋಪಿಸುತ್ತಿವೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ'ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಲಿದ್ದಾರೆ'- ಚಿರಾಗ್ ಪಾಸ್ವಾನ್ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದುಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಮೃತ್ಯು'ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು': ಸಂಸದ ಕ್ಯಾ. ಚೌಟ