LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರದಿಂದ ಕಾಂಗ್ರೆಸ್ ಸಂಸದ ಶಶಿ ತರೂರ್​ಗೆ ಮಹತ್ವದ ಜವಾಬ್ದಾರಿ

ನವದೆಹಲಿ : ಭಾರತ ಸರ್ಕಾರ ಸರ್ವಪಕ್ಷದ ಸಹಕಾರದೊಂದಿದೆ ಪಾಕ್​​​​ಗೆ ಬುದ್ಧಿ ಕಲಿಸಲು ಮುಂದಾಗಿದೆ. ಸರ್ವಪಕ್ಷ ನಿಯೋಗವನ್ನು ಭಾರತದ ಮಿತ್ರರಾಷ್ಟ್ರಗಳಿಗೆ ಕಳುಹಿಸಿ ಅಲ್ಲಿ ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಭಾರತ ಹೊಂದಿದೆ ಎಂದು ಸಾರುವ ಕೆಲಸ ಮಾಡಲಿದೆ. ಈ ನಿಯೋಗದ ನೇತೃತ್ವವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್​ಗೆ ನೀಡಲಾಗಿದೆ. ಕಾಂಗ್ರೆಸ್​​​ ಬಿಜೆಪಿ ವಿರೋಧ ಪಕ್ಷಗಳಾಗಿದ್ದರು, ದೇಶದ ವಿಷಯ ಬಂದಾಗ ಒಟ್ಟಾಗಿರಬೇಕು ಎಂಬುವುದಾಗಿ ಈ ಮೂಲಕ ಹೇಳಿದೆ.

ಪಾಕ್ ಹಾಗೂ ಭಯೋತ್ಪಾದನೆ ಕೃತ್ಯಕ್ಕೆ ಒಂದು ಪೂರ್ಣವಿರಾಮ ಹಾಕುವ ನಿರ್ಧಾರ ಭಾರತ ಮಾಡಿದೆ. ಹೌದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಭಾರತ 26 ನಾಗರಿಕರನ್ನು ಹಾಗೂ ಸೈನಿಕರನ್ನು ಕಳೆದುಕೊಂಡಿದೆ. ಇದಕ್ಕೆ ಪ್ರತಿಕಾರವಾಗಿ ಭಾರತ ಮೇ 7ರಂದು ಆಪರೇಷನ್ ಸಿಂದೂರದ ಮೂಲಕ ಮಹತ್ವದ ಉತ್ತರ ನೀಡಿತ್ತು.

ಆಪರೇಷನ್ ಸಿಂಧೂರ್ ನಂತರ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಹೊಗಳಿದ್ದರು. ಇದೀಗ ಅವರು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಭಾರತದ ಬಲವಾದ ಸಂದೇಶವನ್ನು ಜಗತ್ತಿಗೆ ಸಾರಲು ಸರ್ವಪಕ್ಷ ನಿಯೋಗದ ನೇತೃತ್ವ ವಹಿಸಲಿದ್ದಾರೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST