Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್‌ ರಾಜಕೀಯ ಜಾತ್ರೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಜನರ ಹಣವನ್ನು ವ್ಯರ್ಥ ಮಾಡುತ್ತ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ (Sadhana Samavesha) ನಡೆಸುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದರು. ಸಾಧನಾ ಸಮಾವೇಶ ಕುರಿತು ಜೆಪಿ ಭವನದಲ್ಲಿ ಮಾತನಾಡಿದ ಅವರು, ಯಾವ ಸಾಧನೆಗಾಗಿ ಈ ಸಮಾವೇಶ ಮಾಡುತ್ತಿದ್ದಾರೆ ಎನ್ನುವುದೇ ಅರ್ಥವಾಗುತ್ತಿಲ್ಲ. ಸರ್ಕಾರದ ವಿರುದ್ಧ ಸಾಮಾನ್ಯ ಜನರೇ ಹೆಚ್ಚು ಪ್ರಶ್ನೆ ಕೇಳುತ್ತಿದ್ದಾರೆ. ಸಾರಿಗೆ ಇಲಾಖೆ ಪರಿಸ್ಥಿತಿ ಎಲ್ಲರಿಗೂ ಗೋಚರಿಸುತ್ತಿದೆ. ನೌಕರರ ಅರಿಯರ್ಸ್ ಇನ್ನೂ ಬಾಕಿಯೇ ಇದೆ. ಹಲವು ಬಾರಿ ಮಾತುಕತೆ ನಡೆದರೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಶಕ್ತಿ ಯೋಜನೆ ಹೆಸರಿನಲ್ಲಿ ಉಚಿತ ಬಸ್ ಸೇವೆ ಘೋಷಣೆ ಮಾಡಿದ್ದರೂ ಈಗ ಸಾರಿಗೆ ಇಲಾಖೆ ಸಂಕಷ್ಟದಲ್ಲಿದೆ. ಇದಕ್ಕೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಒಂದೇ ಒಂದು ಹೊಸ ಬಸ್ ಖರೀದಿ ಮಾಡಿಲ್ಲ. ಬಸ್‌ಗಳ ನಿರ್ವಹಣೆಯೂ ಸರಿಯಾಗಿ ನಡೆಯುತ್ತಿಲ್ಲ. ಒಂದು ಟಯರ್ ಬದಲಾಯಿಸಲು ಕೂಡ ಹಣದ ಕೊರತೆ ಇದೆ. ನೌಕರರ ಸಂಬಳ ಪಾವತಿಸುವ ವಿಚಾರದಲ್ಲಿಯೂ ಸರ್ಕಾರ ಗಂಭೀರತೆ ತೋರಿಸುತ್ತಿಲ್ಲ. ಕುಮಾರಸ್ವಾಮಿ ಅವರು 4,500 ಇವಿ ಬಸ್‌ಗಳನ್ನು ಬೆಂಗಳೂರಿಗೆ ತರದೇ ಇದ್ದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತಿತ್ತು ಎಂದು ಟೀಕಿಸಿದರು.

ಸಾಧನಾ ಸಮಾವೇಶ ಮಾಡುವ ಬದಲು ಬೆಂಗಳೂರಿನ ಕಸದ ಸಮಸ್ಯೆ ನಿವಾರಣೆಗೆ ಗಮನ ಕೊಡಬೇಕು. ನಗರದಲ್ಲಿ ಎಲ್ಲೆಡೆ ಕಸದ ರಾಶಿ ಹೆಚ್ಚಾಗಿದೆ. ಜನರು ತೊಂದರೆ ಅನುಭವಿಸುತ್ತಿದ್ದಾರೆ. ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದ ಬೆಂಗಳೂರು ಈಗ ಗಾರ್ಬೇಜ್ ಸಿಟಿಯಾಗುತ್ತಿದೆ. ಇಂತಹ ಸಮಸ್ಯೆಗಳ ನಡುವೆಯೇ ಸರ್ಕಾರ ಸಾಧನಾ ಸಮಾವೇಶ ಮಾಡುತ್ತಿದೆ ಎಂದು ಕಿಡಿಕಾರಿದರು.

ಪತ್ರಿಕೆಗಳಲ್ಲಿ ಜಾಹಿರಾತು ನೀಡಿ ಅತಿ ಹೆಚ್ಚು ಅವಧಿ ಮುಖ್ಯಮಂತ್ರಿ ಆಗಿದ್ದೇನೆ ಎಂದು ಸಿಎಂ ಅವರು ತಮ್ಮನ್ನು ತಾವು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಆದರೆ ಎಷ್ಟು ವರ್ಷ ಅಧಿಕಾರದಲ್ಲಿದ್ದಿರಿ ಅನ್ನೋದಕ್ಕಿಂತ, ಅಧಿಕಾರದಲ್ಲಿದ್ದಾಗ ಎಷ್ಟು ಜನರ ಬದುಕು ಬದಲಾಯಿಸಿದ್ದೀರಿ ಎಂಬುದೇ ಮುಖ್ಯ ಎಂದು ಹೇಳಿದರು. ಸರ್ಕಾರದ ಹಣದಲ್ಲಿ ಸಮಾವೇಶ ನಡೆಸಿ ಮೋಜು-ಮಸ್ತಿ ಮಾಡುತ್ತಿದ್ದಾರೆ. ಜನರು ಕಟ್ಟಿದ ತೆರಿಗೆ ಹಣವನ್ನು ವ್ಯರ್ಥ ಮಾಡಲಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹರಿಹಾಯ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ