LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ಹಾಸನದಲ್ಲಿ ಸಮಾವೇಶದಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ

ಬೆಂಗಳೂರು : ಉಪಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್​ ಈಗ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಜೆಡಿಎಸ್‌-ಬಿಜೆಪಿ ಎರಡಕ್ಕೂ ಟಕ್ಕರ್‌ ಕೊಡಲು ‘ಕೈ’ ತಂತ್ರ ಹೂಡಿದೆ.

ಸಿಎಂ ಸಿದ್ದರಾಮಯ್ಯ ತಂಡ ವರ್ಸಸ್ ಡಿಸಿಎಂ ಡಿಕೆ ಶಿವಕುಮಾರ್ ತಂಡದ ನಡುವಣ ಮುಸುಕಿನ ಗುದ್ದಾಟದ ಮಧ್ಯೆ ಹಾಸನದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಕ್ಷಣಗಣನೆ ಶುರುವಾಗಿದೆ. ಅರಸೀಕೆರೆ ರಸ್ತೆಯ ಎಸ್​ಎಂ ಕೃಷ್ಣ ನಗರದಲ್ಲಿರುವ ಕೆಎಸ್​ಸಿಎ ಕ್ರಿಕೆಟ್ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಲಕ್ಷ ಲಕ್ಷ ಜನರ ಆಗಮನದ ನಿರೀಕ್ಷೆ ಇದೆ.

ಬೆಳಗ್ಗೆ 11.30ಕ್ಕೆ ಹಾಸನದಲ್ಲಿ ಜನಕಲ್ಯಾಣ ಸಮಾವೇಶ ಉದ್ಘಾಟನೆ ಆಗಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಇಡೀ ಸಚಿವ ಸಂಪುಟ ದಂಡೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. 480 ಅಡಿ ಅಗಲ ಮತ್ತು 600 ಅಡಿ ಉದ್ದದ ಬೃಹತ್‌ ಟೆಂಟ್‌ ಹಾಕಲಾಗಿದೆ. ಸುಮಾರು 70 ಸಾವಿರ ಜನರು ಕೂರಲು ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಲಕ್ಷಾಂತರ ಜನರು ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇರುವುದರಿಂದ, ಪೊಲೀಸ್ ಇಲಾಖೆ ಸಾಕಷ್ಟು ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಐವರು ಎಸ್ಪಿಗಳು, ಆರು ಎಎಸ್ಪಿಗಳು, 12 ಡಿವೈಎಸ್ಪಿ, 50ಕ್ಕೂಹೆಚ್ಚು ಸಿಪಿಐ, 80ಕ್ಕೂ ಹೆಚ್ಚು ಪಿಎಸ್​​​​ಐಗಳು ಸೇರಿ ಎರಡು ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಒಟ್ಟಿನಲ್ಲಿ ಜೆಡಿಎಸ್ ಭದ್ರಕೋಟೆಯಲ್ಲಿ ಕೈ ಶಕ್ತಿ ಪ್ರದರ್ಶನಕ್ಕೆ ಹಾಸನ ಸಜ್ಜಾಗಿದೆ. ವಿಪಕ್ಷಗಳ ಆರೋಪಗಳಿಗೆ ಉತ್ತರ ನೀಡಲೆಂದೇ ನಡೆಯುತ್ತಿರುವ ಸಮಾವೇಶದಲ್ಲಿ ನಾಯಕರ ತಿರುಗೇಟು ಹೇಗಿರಲಿದೆ ಎಂಬ ಕುತೂಹಲ ಮೂಡಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಸರಣಿ ಅಪಘಾತ: ಗಾಯಾಳು ರಕ್ಷಿಸಲು ಬಂದ ಆಂಬುಲೆನ್ಸ್‌ಗೂ ಅಪಘಾತ: ಓರ್ವ ಸಾವುವಿಮಾನಗಳ ಮಾದರಿಯಲ್ಲಿ ರೈಲಿನಲ್ಲೂ ಲಗೇಜ್‌ ನಿಯಮ ಜಾರಿಗೆ ತರಲು ರೈಲ್ವೆ ಇಲಾಖೆ ಚಿಂತನೆ!