LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಗಂಗಾವತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ' - ಸಿಎಂ

ವಿಜಯನಗರ(ಹೊಸಪೇಟೆ) : ಗಂಗಾವತಿ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಗಂಗಾವತಿ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಅನರ್ಹತೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, , ನ್ಯಾಯಾಲಯ ಅವರಿಗೆ ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಗಂಗಾವತಿ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರಜಾಪ್ರಭುತ್ವದಲ್ಲಿ ಟೀಕಿಸುವುದು ಸಹಜ. ಆದರೆ ನಮ್ಮ ಸರ್ಕಾರದ ಸಾಧನೆ, ನಮ್ಮ ಬದ್ಧತೆಯ ಬಗ್ಗೆ ಜನರಿಗೆ ತಿಳಿದೇ ತಿಳಿಯುತ್ತದೆ ಎಂದರು.

2008-2013ರವರೆಗೆ ವಿರೋಧ ಪಕ್ಷದ ನಾಯಕನಾಗಿ , ಲೋಕಾಯುಕ್ತ ಸಂತೋಷ್ ಹೆಗಡೆ ಅವರ ಅಕ್ರಮ ಗಣಿಗಾರಿಕೆಯ ವರದಿ ಆಧರಿಸಿ, ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲಾಗಿತ್ತು. ಅಂದು ಬಿಜೆಪಿ ಸರ್ಕಾರದ ಅದನ್ನು ವಿರೋಧಿಸಿತ್ತು. ಅಂದು ಅಕ್ರಮ ಗಣಿಗಾರಿಕೆ ವಿರುದ್ಧ ನಡೆಸಿದ ಹೋರಾಟಕ್ಕೆ ಇಂದು ಫಲ ದೊರೆತಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು ಹಾಗೂ ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ತಿಳಿಸಿದರು.

ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ಸದಾ ವಿರೋಧಿಸಿದ್ದೇನೆ.

ಸಿದ್ದರಾಮಯ್ಯನವರು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದರು ಎಂದು ಜನಾರ್ಧನ ರೆಡ್ಡಿಯವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿ, ಅವರ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026