Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸಹಕಾರಿ ಕ್ಷೇತ್ರ ಪ್ರಾಮಾಣಿಕ, ನಂಬಿಕೆ ಮೇಲೆ ನಿಂತಿದೆ: ಸಚಿವ ಸುಧಾಕರ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸಹಕಾರಿ ಕ್ಷೇತ್ರಗಳಲ್ಲಿ ಅಭಿವೃದ್ದಿ ಸಾಧಿಸಬೇಕಾದರೆ ಪ್ರಾಮಾಣಿಕತೆ ಮತ್ತು ನಂಬಿಕೆ ಸೇವೆ ಬಹಳ ಮುಖ್ಯವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಅನೇಕ ಸಹಕಾರಿ ಬ್ಯಾಂಕ್‌ಗಳು ವಹಿವಾಟಿನಲ್ಲಿ ಅಭಿವೃದ್ದಿ ಸಾಧಿಸಿದ್ದು
, ಬ್ಯಾಂಕ್‌ನ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ.

ಗ್ರಾಹಕರ ವಿಶ್ವಾಸಗಳಿಸಿದಲ್ಲಿ ಮಾತ್ರ ಬ್ಯಾಂಕ್ ಅಭಿವೃದ್ದಿಯತ್ತ ದಾಪುಗಾಲಿಡಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಸಿಬ್ಯಾಂಕ್ ಜಿಲ್ಲಾಧ್ಯಕ್ಷ ಹಾಗೂ ಹೊಯ್ಸಳ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ.ಸುಧಾಕರ ತಿಳಿಸಿದರು.


ಅವರು, ಶನಿವಾರ ಬ್ಯಾಂಕ್ ಕಚೇರಿ ಆವರಣದಲ್ಲಿ ೨೦೨೩-೨೪ನೇ ಸಾಲಿನ ೨೨ನೇ ವರ್ಷದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾರಂಭದ ಹಂತದಲ್ಲಿ ಕೇವಲ ಕೆಲವೇ ಜನರ ಸಹಕಾರದೊಂದಿಗೆ ಆರಂಭಗೊಂಡ ಹೊಯ್ಸಳ ಕ್ರೆಡಿಟ್ ಸೌಹಾರ್ಧ ಸಹಕಾರಿ ಸಂಘ ನಿಯಮಿತ ಇಂದು ನಿಮ್ಮೆಲ್ಲರ ಸಹಕಾರದಿಂದ ಉತ್ತಮ ಲಾಭದತ್ತ ಮುನ್ನಡೆದಿದೆ.

ಸೌಹಾರ್ಧ ಸಹಕಾರಿ ಕ್ಷೇತ್ರದ ಮುಂಚೂಣಿ ಬ್ಯಾಂಕ್‌ಗಳಲ್ಲಿ ಹೊಯ್ಸಳ ಕ್ರೆಡಿಟ್ ಸೌಹಾರ್ಧ ಸಹ ಒಂದಾಗಿದೆ. ಬ್ಯಾಂಕ್‌ನ ಆರ್ಥಿಕ ಬಲವರ್ಧನೆಗೆ ಪ್ರಾಮಾಣಿಕವಾಗಿ ಸಹಕರಿಸುತ್ತಿರುವ ಬ್ಯಾಂಕ್‌ನ ಎಲ್ಲಾ ನಿರ್ದೇಶಕರಿಗೂ, ಸಿಬ್ಬಂದಿ ವರ್ಗಕ್ಕೂ ಗ್ರಾಹಕರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಸಹಕಾರದಿಂದ ಇನ್ನೂ ಹೆಚ್ಚಿನ ಆರ್ಥಿಕ ಸಾಧನೆಯನ್ನು ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವೆ.

ಹೊಯ್ಸಳ ಕ್ರೆಡಿಟ್ ಸೌಹಾರ್ಧ ಬ್ಯಾಂಕ್ ಇನ್ನೂ ಕೆಲವೇ ದಿನಗಳಲ್ಲಿ ಹಲವಾರು ನೂತನ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದರು. ಮಹಾಸಭೆಯಲ್ಲಿ ನಿರ್ದೇಶಕರಾದ ಸಿ.ವೀರಭದ್ರಬಾಬು, ಪ್ರಹ್ಲಾದ್‌ಶೆಟ್ಟಿ, ಎಸ್.ಕೆ.ಮರಳಿ, ವ್ಯವಸ್ಥಾಪಕ ವೀರೇಶ್‌ಹಳ್ಳೇರ ಮುಂತಾದವರು ಪಾಲ್ಗೊಂಡಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ