LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಕೇಸ್: ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ

ಚೆನ್ನೈ : ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ 7 ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ಕಂಪನಿ ಮತ್ತು ತಮಿಳುನಾಡು ಆಹಾರ ಮತ್ತು ಔಷಧ ಆಡಳಿತ ಎರಡರಿಂದಲೂ ಅನೇಕ ನಿಯಮಗಳ ಉಲ್ಲಂಘನೆಯಾಗಿದೆ. ಕಳಪೆ ಮೂಲಸೌಕರ್ಯ ಮತ್ತು ಪುನರಾವರ್ತಿತ ಸುರಕ್ಷತಾ ಉಲ್ಲಂಘನೆಗಳ ಹೊರತಾಗಿಯೂ ಶ್ರೇಸನ್ 2011ರಲ್ಲಿ ಪರವಾನಗಿ ಪಡೆದಾಗಿನಿಂದ ಅನಿಯಂತ್ರಿತವಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿತ್ತು. ಹೀಗಾಗಿ ಇಡಿ ಅಧಿಕಾರಿಗಳು ಚೆನ್ನೈನ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನದಲ್ಲಿ ವಿಷಕಾರಿ ದ್ರಾವಣವಾದ ಡೈಎಥಿಲಿನ್ ಗ್ಲೈಕಾಲ್ ಮತ್ತು ಎಥಿಲಿನ್ ಗ್ಲೈಕಾಲ್ ಇರುವ ಸಿರಪ್ ಸೇವಿಸಿದ ೨೦ ಮಕ್ಕಳು ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದರು. ಕೆಲ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗಿದ್ದರು. ಇನ್ನು ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸುವ ಶ್ರೇಸನ್ ಫಾರ್ಮಾ ಮಾಲೀಕ ರಂಗನಾಥನ್‌ನನ್ನು ಮಧ್ಯಪ್ರದೇಶ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026