ಬೆಳಗಾವಿ, ಮೇ 18: 4,500 ಕೋಟಿ ರೂ. ವಂಚನೆ ಆರೋಪ ಪ್ರಕರಣದಲ್ಲಿ ಆರೋಪಿ ಶಿವಾನಂದ ನೀಲಣ್ಣವರ್ ಅವರನ್ನು 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಬೆಳಗಾವಿಯ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. 35 ಸಾವಿರಕ್ಕೂ ಹೆಚ್ಚು ಹೂಡಿಕೆದಾರರಿಂದ ಸಾವಿರ ಕೋಟಿ ರೂ. ಮೀರಿದ ಹಣದ ವ್ಯವಹಾರ ನಡೆದಿರುವ ಹಿನ್ನೆಲೆ, ಬೆಂಗಳೂರಿನ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಬೇಕಿದೆ ಎಂದು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಸಿಐಡಿ ಪರ ವಕೀಲರ ವಾದ ಆಲಿಸಿದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶ ಗಂಗಾಧರ ಅವರು ಆರೋಪಿಯನ್ನು ಸಿಐಡಿ ವಶಕ್ಕೆ ನೀಡುವಂತೆ ಆದೇಶಿಸಿದರು.