LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಸು, ಕುರಿ & ಕೋಳಿ ಸಾಕಾಣಿಕೆ(ಸಮಗ್ರ ಕೃಷಿ) ಉಚಿತ ತರಬೇತಿ

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು, ಕುರಿ & ಕೋಳಿ ಸಾಕಾಣಿಕೆ ಕುರಿತ 13 ದಿನಗಳ ಉಚಿತ ಸಮಗ್ರ ಕೃಷಿ ತರಬೇತಿಯು ಏಪ್ರಿಲ್ 6 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026