LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಕಲಿ ಖಾತೆ ಸೃಷ್ಟಿಸಿ, ಮಹಿಳೆಯ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಆರೋಪದಲ್ಲಿ ವ್ಯಕ್ತಿ ಬಂಧನ

ನಕಲಿ ಖಾತೆ ಸೃಷ್ಟಿಸಿ 13,000 ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಫೋಟೊ ಮತ್ತು ವೀಡಿಯೊಗಳನ್ನು ಇಟ್ಟುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಚಿತ್ರಗಳನ್ನು ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಸಂಡೂರಿನಲ್ಲಿ ಬಂಧಿಸಿದ್ದಾರೆ.



ಶುಭಂ ಕುಮಾ‌ರ್ ಮನೋಜ್ ಪ್ರಸಾದ್ ಸಿಂಗ್ (25) ಬಂಧಿತ ಆರೋಪಿ. ಆರೋಪಿ ಸಂಡೂರಿನ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮುಂಬೈನಲ್ಲಿ ಹುಡುಗಿಯೊಬ್ಬಳು ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ಬಳಸಿಕೊಂಡು ಯಾರೋ ತನ್ನನ್ನು ಬ್ಲ್ಯಾಕ್‌ಮೇಲ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸ್ ದೂರು ದಾಖಲಿಸಿದ ನಂತರ, ಮಹಾರಾಷ್ಟ್ರ ಸೈಬ‌ರ್ ಪೊಲೀಸರು ತನಿಖೆ ಪ್ರಾರಂಭಿಸಿದರು. ತಾಂತ್ರಿಕ ಪುರಾವೆ ಸಂಗ್ರಹಿಸಿ ಬ್ಲ್ಯಾಕ್‌ಮೇಲರ್‌ನ ಸ್ಥಳವನ್ನು ಪತ್ತೆಹಚ್ಚಿದ ನಂತರ, ಶುಭಂ ಕುಮಾರ್ ನನ್ನು ಬಂಧಿಸಿ, ನಾಲ್ಕು ಸ್ಮಾರ್ಟ್‌ಫೋನ್‌ಗಳು ಮತ್ತು ಕಂಪ್ಯೂಟರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಅದರಿಂದ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡೋದೇ ಇವನ ಕೆಲಸವಾಗಿತ್ತು. ಈವರೆಗೂ ಒಟ್ಟು 20ಕ್ಕೂ ಹೆಚ್ಚು ನಕಲಿ ಖಾತೆಗಳು ಮತ್ತು 100 ಇಮೇಲ್ ಐಡಿಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ತನಿಖೆ ವೇಳೆ, ಮಹಿಳೆಯರಿಗೆ ನಗ್ನವಾಗಿ ವಿಡಿಯೋ ಕರೆ ಮಾಡುವಂತೆ ಕಿರುಕುಳ ಕೊಡುತ್ತಿದ್ದ. ಮಹಿಳೆಯರು ಒಪ್ಪದೇ ಇದ್ದಾಗ ನಕಲಿ ಖಾತೆ ಸೃಷ್ಟಿ ಮಾಡಿ, ಮಾನಹಾನಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಜೊತೆಗೆ ಆರೋಪಿಯ ಮೊಬೈಲ್‌ನಿಂದ 13,500 ಮಹಿಳೆಯರ ಅಶ್ಲೀಲ ದೃಶ್ಯಗಳಿರುವ ಸ್ಕ್ರೀನ್ ಶಾಟ್ಗಳನ್ನ ರಿಕವರಿ ಮಾಡಿಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026