LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬ್ಯಾಂಕ್ ಮ್ಯಾನೇಜರ್ ನಿಂದಲೇ ನಕಲಿ ಗೋಲ್ಡ್ ಲೋನ್ ಮೂಲಕ ಕೋಟಿ ಕೋಟಿ ಲೂಟಿ

ಬೆಂಗಳೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾರೀ ವಂಚನೆ ನಡೆದಿದ್ದು, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಬ್ಯಾಂಕ್ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿದ ಆರೋಪ ಕೇಳಿಬಂದಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಮಲ್ಲೇಶ್ವರಂನ 15ನೇ ಕ್ರಾಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿ ಕೋಟಿ ಕೋಟಿ ರೂ. ಹಣ ಲೂಟಿ ಮಾಡಿರುವ ಆರೋಪ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಎನ್. ರಘು ವಿರುದ್ಧ ಕೇಳಿಬಂದಿದೆ. 2025ರ ಅಕ್ಟೋಬರ್ 4ರಿಂದ ಡಿಸೆಂಬರ್ 9ರವರೆಗೆ ಒಟ್ಟು 41 ಗ್ರಾಹಕರ ಖಾತೆಗಳಲ್ಲಿ ಚಿನ್ನವೇ ಇರದೆ ನಕಲಿ ಗೋಲ್ಡ್ ಲೋನ್‌ಗಳನ್ನು ಓಪನ್ ಮಾಡಿ, ಸುಮಾರು 3.11 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ.

ವಯೋವೃದ್ಧರು, ಪಿಂಚಣಿದಾರರು, ಅರ್ಚಕರು ಹಾಗೂ ಹೋಲ್‌ಸೇಲ್ ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿದ ಆರೋಪವಿದ್ದು, ಬ್ಯಾಂಕ್ ಕೆಲಸಕ್ಕೆ ಅಗತ್ಯವೆಂದು ಸುಳ್ಳು ಹೇಳಿ ಅವರಿಂದ ಒಟಿಪಿ ಮತ್ತು ಚೆಕ್ ಪಡೆದು ನಂಬಿಕೆ ದ್ರೋಹ ಮಾಡಲಾಗಿದೆ. ಗ್ರಾಹಕರಿಗೆ ತಿಳಿಯದೇ ಅವರ ಖಾತೆಗಳಲ್ಲಿ ಗೋಲ್ಡ್ ಲೋನ್ ತೆರೆದು ಹಣವನ್ನು ಡ್ರಾ ಮಾಡಿ ತನ್ನ ಖಾತೆಗೆ ವರ್ಗಾಯಿಸಿಕೊಂಡು ಎಸ್ಕೇಪ್ ಆಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈಗಾಗಲೇ ಕೆನರಾ ಬ್ಯಾಂಕ್ 41 ಖಾತೆಗಳನ್ನು ಫ್ರೀಜ್ ಮಾಡಿದ್ದು, ಯಾವುದೇ ಚಿನ್ನವಿಲ್ಲದೇ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಘಟನೆಯ ನಂತರ ತಮ್ಮ ಖಾತೆಗಳಲ್ಲಿ ಯಾವುದೇ ಅನುಮಾನಾಸ್ಪದ ಲೋನ್ ಇದೆಯೇ ಎಂಬುದನ್ನು ತಕ್ಷಣ ಪರಿಶೀಲಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026