LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆಬ್ಬಾಳ್ಕರ್ ವಿರುದ್ಧ ಮಾನಹಾನಿ ಪದ ಪಳಕೆ ಸಿ.ಟಿ. ರವಿ ಬಂಧನ

ಬೆಳಗಾವಿ,19 : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್‌ನಲ್ಲಿ ಗುರುವಾರ ಅಶ್ಲೀಲ ಪದಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ  ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವ ಮೂಲಕ ಬಂಧಿಸಲಾಗದೆ.

ಆದರೆ ರವಿ ಬಂಧನ ಎಫ್‌ಐಆರ್ ಆದಾರದ ಮೇಲೆ ಆಗಿದೆಯೋ ಅಥವಾ ಪ್ರತಿಭಟನೆ ನಡೆಸುತ್ತಿದ್ದರೂ ಎಂಬ ಕಾರಣಕ್ಕೆ ಬಂಧನವಾಗಿದೆಯೋ ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಬೇಕಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ ದೂರಿನ್ವಯ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75,79 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್‌ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ  ವೇಳೆ ಸಿ.ಟಿ ರವಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ. ಸಿ.ಟಿ ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ  ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿ.ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಮನಾದುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬಸವರಾಜ ಹೊರಟ್ಟಿ ಭೇಟಿಯಾದ ಡಿಸಿಎಂ, ಸಚಿವರು:
ಸಚಿವರ ವಿರುದ್ಧ ಸಿ.ಟಿ ರವಿ ಅಸಂವಿಧಾನಿಕ ಪದ ಬಳಕೆ ಆರೋಪ ಪ್ರಕರಣ ಸದ್ದು ಮಾಡ್ತಿದ್ದಂತೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸಚಿವ ಹಾಗೂ ಪರಿಷತ್‌ನ ಕಾಂಗ್ರೆಸ್ ಸಭಾ ನಾಯಕ ಎನ್.ಎಸ್ ಬೋಸರಾಜು, ಸಚಿವರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಡಗಡಿ, ಡಾ.ಶರಣಪ್ರಕಾಶ್ ಪಾಟೀಲ್, ಹಿರಿಯ ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಗರಾಜ್ ಯಾದವ್, ಉಮಾಶ್ರೀ, ಶಾಸಕಿಯರಾದ ನಯನ ಮೋಟಮ್ಮ, ರೂಪಾ ಶಶಿಧರ್, ಲತಾ ಮಲ್ಲಿಕಾರ್ಜುನ್, ಅನ್ನಪೂರ್ಣ ತುಕಾರಂ ಸೇರಿದಂತೆ ಕಾಂಗ್ರೆಸ್ ಶಾಸಕರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸಿ.ಟಿ ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ರವಿ ವಿರುದ್ಧ  ಹೆಬ್ಬಾಳ್ಕರ್ ಕೆಂಡಾಮಂಡಲ
ತನ್ನ ವಿರುದ್ಧ ಮಾತಾಡಿದ್ದ ಸಿ.ಟಿ ರವಿ ಅವರನ್ನು ಲಕ್ಷ್ಮೀ ಹೆಬ್ಬಾಳ್ಕರ್ ಪರಿಷತ್‌ನಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ. ಏಕವಚನದಲ್ಲೇ ಮಾತಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಿನಗೆ ತಾಯಿ ಇಲ್ವಾ? ಹೆಂಡತಿ ಇಲ್ವಾ? ಎಂದು ಸಿ.ಟಿ ರವಿ ಅವರಿಗೆ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST