LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಸಿ.ಟಿ.ರವಿ ಆರೋಪ.!

 

ಬೆಂಗಳೂರು:  ಇಂದಿರಾ ಗಾಂಧಿಯವರು 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಕರ್ನಾಟಕದಲ್ಲಿ ಘೋಷಿತವಲ್ಲದ ತುರ್ತು ಪರಿಸ್ಥಿತಿ ಈಗ ಇದೆ ಎಂದು ವಿಧಾನಪರಿಷತ್ತಿನ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್ ರಾಜ್ಯ ಮಾಡಲು ಹೊರಟಿದ್ದೀರಾ ನೀವು? ಪೊಲೀಸ್ ಠಾಣೆಗಳನ್ನು ಕಾಂಗ್ರೆಸ್ ಸರಕಾರದ ಮರ್ಜಿಗೆ ತಕ್ಕಂತೆ ಬಳಸುವ ಪರಿಸ್ಥಿತಿ ತುರ್ತು ಪರಿಸ್ಥಿತಿ ಕಾಲದಲ್ಲೂ ಇತ್ತು. ಈಗಲೂ ಅದೇ ಕೆಲಸ ಮಾಡುತ್ತಿದ್ದೀರಿ. ರಾಜಕೀಯಪ್ರೇರಿತ ವರ್ತನೆ ಎದ್ದು ಕಾಣುತ್ತದೆ ಎಂದು ಆಕ್ಷೇಪಿಸಿದರು.

ವಿಧಾನಪರಿಷತ್ತಿನಲ್ಲಿ ನಡೆದ ಘಟನೆ, ಸಭಾಪತಿಗಳು ರೂಲಿಂಗ್ ಕೊಟ್ಟ ಬಳಿಕ ನನ್ನ ಮೇಲೆ ಕೇಸ್ ದಾಖಲಿಸಿ ನನ್ನನ್ನು ಬಂಧಿಸಿದ್ದರು. ನಾನು ಕೊಟ್ಟ ದೂರು ದಾಖಲಾಗಿಯೇ ಇಲ್ಲ. ಸಭಾಪತಿಗಳು, ವಿಧಾನಸೌಧದ ಕಾರಿಡಾರ್‍ನಲ್ಲಿ ನಡೆದ ಹಲ್ಲೆಗೆ ಸಂಬಂಧಿಸಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದರೂ ಇವತ್ತಿನವರೆಗೆ ಅಪರಾಧಿಗಳನ್ನು ಬಂಧಿಸಿಲ್ಲ ಎಂದು ದೂರಿದರು.

ದಲಿತ ಸಮಾಜಕ್ಕೆ ಸೇರಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರನ್ನು 4ರಿಂರ 5 ಗಂಟೆ ಕಾಲ ದಿಗ್ಬಂಧನದಲ್ಲಿ ಇಡಲಾಗಿತ್ತು. ಆದರೆ, ದಿಗ್ಬಂಧನದಲ್ಲಿ ಇಟ್ಟವರನ್ನು ಇನ್ನೂ ಬಂಧಿಸಿಲ್ಲ ಎಂದು ಆಕ್ಷೇಪಿಸಿದರು. ರವಿಕುಮಾರ್ ಅವರು ವಿಷಾದ ವ್ಯಕ್ತಪಡಿಸಿದ ನಂತರ ಐದೈದು ಗಂಟೆ ವಿಚಾರಣೆಗೆಂದು ಠಾಣೆಯಲ್ಲಿ ಕೂರಿಸಿದ್ದರು ಎಂದು ಟೀಕಿಸಿದರು.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026