LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೃಷಿ ಜಮೀನಿನ ಪಂಪ್ ಸೆಟ್ಗಳಿಗೆ ಹಗಲು ಹೊತ್ತಿನಲ್ಲಿ ಕರೆಂಟ್.!

 

ಧಾರವಾಡ : ಹೌದು ರೈತರ ಕೃಷಿ ಜಮೀನಿನ ಪಂಪ್ ಸೆಟ್ ಗಳಿಗೆ ಸರ್ಕಾರದ ನಿಯಮಾನುಸಾರ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಲಘಟಗಿ ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ನಿಯಮದಂತೆ ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು.

ಆಯಾ ಭಾಗದ ಕಡೆ ಒಂದು ವಾರ ರಾತ್ರಿ ಇನ್ನೊಂದು ವಾರ ಹಗಲು ಹೊತ್ತಿನಲ್ಲಿ ಸಮಯ ನಿಗದಿಗೊಳಿಸಿ ವಿದ್ಯುತ್ ಪೂರೈಕೆ ಮಾಡಬೇಕು. ಅರಣ್ಯ ಪ್ರದೇಶದ ಕೃಷಿ ಜಮೀನುಗಳಿಗೆ ರಾತ್ರಿ ಮೂರು ಗಂಟೆಗೆ ವಿದ್ಯುತ್ ನೀಡಿದರೆ ಕಾಡುಪ್ರಾಣಿಗಳ ಹಾವಳಿಯಿಂದ ರೈತರಿಗೆ ಜಮೀನುಗಳಿಗೆ ಹೋಗಲು ತೊಂದರೆಯಾಗುತ್ತದೆ. ಅವರಿಗೆ ಹಗಲು ಹೊತ್ತಿನಲ್ಲಿ ಹೆಚ್ಚಿನ ಸಮಯ ವಿದ್ಯುತ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಮಧ್ಯ ರಾತ್ರಿ ವಿದ್ಯುತ್ ನೀಡುವುದರಿಂದ ಮೈ ಕೊರೆಯುವ ಚಳಿಯಲ್ಲಿ ಜಮೀನುಗಳಿಗೆ ರೈತರು ತೆರಳಿ ಬೆಳೆಗೆ ನೀರು ಹಾಯಿಸಲು ಕಷ್ಟವಾಗುತ್ತಿದೆ ಎಂದು ರೈತರು ಮನವಿ ಮಾಡಿದ್ದರು. ಹೀಗಾಗಿ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆ ಮಾಡುವಂತೆ ಸಚಿವರು ಸೂಚನೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ಆಂಬ್ಯುಲೆನ್ಸ್ ಸೇವೆಗೆ ನಿಯಮ ರೂಪಿಸಲು ಸರ್ಕಾರ ಚಿಂತನೆಸತತ ಮೂರು ಪ್ರಯತ್ನಗಳ ನಂತರ ಯುಪಿಎಸ್‌ಸಿ ಪರೀಕ್ಷೆ ಪಾಸಾದ ರಿಯಾ ಸೈನಿಕಾಲ್ತುಳಿತ ಕೇಸ್: ಅಮಾನತು ಆದೇಶ ಹಿಂಪಡೆದ ಬೇನ್ನಲ್ಲೇ ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆಮಂಗಳೂರಿನಲ್ಲಿ NIA ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿರಸ್ತೆ ಅಗಲೀಕರಣಕ್ಕೆ ಮುಖ್ಯಮಂತ್ರಿಗಳಿಂದ ಗ್ರೀನ್ ಸಿಗ್ನಲ್: ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ)ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ .! 01-08-2025ನಿಮ್ಮ ಮನೆಯಲ್ಲಿ ಈ ಲಕ್ಷಣಗಳಿದ್ದರೆ ಕೆಟ್ಟ ದೃಷ್ಟಿ- ವಾಸ್ತುದೋಷ ಇದೆ ಎಂದರ್ಥ!ವಚನ: --ದಸರಯ್ಯ .!ಧರ್ಮಸ್ಥಳ: ಮಾಧ್ಯಮಗಳು ಬಿತ್ತರಿಸುತ್ತಿರುವ ಸುದ್ದಿಗಳು ಸತ್ಯಾನ.?ಕೇದಾರನಾಥ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ- 800 ಯಾತ್ರಿಕರ ರಕ್ಷಣೆ