LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾತ್ರಿ 7-8 ಗಂಟೆಯ ಮೇಲೆ ದಕ್ಷಿಣ ಕನ್ನಡ ಸ್ಥಬ್ಧ'- ಡಿಕೆಶಿ

ಬೆಂಗಳೂರು : ರಾತ್ರಿ 7-8 ಗಂಟೆಯ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಸ್ಥಬ್ಧವಾಗುತ್ತದೆ. ಯಾವುದೇ ಕಾರ್ಯಚಟುವಟಿಕೆ ಇರುವುದಿಲ್ಲ. ಧಾರ್ಮಿಕವಾದ ಭಜನೆ, ಬಯಲಾಟ ಹೊರತಾಗಿ ಬೇರೆ ಯಾವುದೇ ಚಟುವಟಿಕೆ ಇರುವುದಿಲ್ಲ. ಈ ವಿಚಾರವಾಗಿ ಅಲ್ಲಿನ ಶಾಸಕರೇ ಕೂತು ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ನೀಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿ, ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜೊತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.

ಬಿಜೆಪಿ ಶಾಸಕ ಗುರುರಾಜಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕು ಎಂದಾಗ ಪ್ರವಾಸೋದ್ಯಮ ಸಚಿವರು ಈ ಬಗ್ಗೆ ನಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ವೇಳೆ ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೇ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಕೆಶಿ, ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಬಹುತೇಕ ಯುವಕರು ಗೆದ್ದು ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಸೇರಿದಂತೆ ದೊಡ್ಡ ಅವಕಾಶ ಕರಾವಳಿ ಭಾಗದಲ್ಲಿದೆ. ಹೀಗಾಗಿ ನಮ್ಮ ಸಚಿವರಾದ ಹೆಚ್.ಕೆ ಪಾಟೀಲ್ ಅವರು ದೊಡ್ಡ ಕನಸು ಕಂಡಿದ್ದು ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ. ಈ ಸಂದರ್ಭದಲ್ಲಿ ಈ ಭಾಗದ ಶಾಸಕರ ಸಭೆ ಕರೆದು ಮಾತನಾಡಬೇಕಿದೆ. ರಾತ್ರಿ 7-8 ಗಂಟೆಯ ಮೇಲೆ ಈ ಕರಾವಳಿ ಭಾಗ ಸ್ಥಬ್ಧವಾಗುತ್ತದೆ. ಯಾವುದೇ ಕಾರ್ಯಚಟುವಟಿಕೆ ಇರುವುದಿಲ್ಲ. ಧಾರ್ಮಿಕವಾದ ಭಜನೆ, ಬಯಲಾಟ ಹೊರತಾಗಿ ಬೇರೆ ಯಾವುದೇ ಚಟುವಟಿಕೆ ಇರುವುದಿಲ್ಲ. ಈ ವಿಚಾರವಾಗಿ ಅಲ್ಲಿನ ಶಾಸಕರೇ ಕೂತು ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ನೀಡಬೇಕು ಎಂದರು.

ರಾತ್ರಿ 8ರ ನಂತರ ಏನು ಮಾಡಬೇಕು ಎಂದು ನೀವೇ ಸಲಹೆ ನೀಡಿ ಎಂದು ಶಾಸಕ ಅರವಿಂದ್ ಬೆಲ್ಲದ್ ಅವರು ಕೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, ರಾತ್ರಿ 7-8 ಗಂಟೆ ನಂತರ ಮಂಗಳೂರು ಸ್ಥಬ್ಧವಾಗಿದೆ ಎಂದರೆ ಮಂಗಳೂರಿನ ಜನ ಹೆಚ್ಚಾಗಿ ಮನೆಯಿಂದಾಚೆ ಬರುವುದಿಲ್ಲ. ಹೀಗಾದರೆ ಯಾವ ಆರ್ಥಿಕ ವಹಿವಾಟು ನಡೆಯುತ್ತದೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಕರಾವಳಿ ಭಾಗದಲ್ಲಿ ಐಟಿಬಿಟಿ ಸ್ಥಾಪಿಸಲು ಪ್ರಸ್ತಾವನೆ ನೀಡಿತು. ಆದರೆ ಅಲ್ಲಿ ಒಂದೇ ಒಂದು ಕಾಂಪ್ಲೆಕ್ಸ್ ಕೂಡ ಇರಲಿಲ್ಲ. ಈಗ ಮೂರೋ, ನಾಲ್ಕೋ ತಲೆ ಎತ್ತುತ್ತಿವೆ ಎಂದು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿಯೇ ಇದ್ದೇವೆ: ದಿನೇಶ ಗುಂಡೂರಾವ್.!ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆ:  ಶಾಸಕ ಟಿ. ರಘುಮೂರ್ತಿಸಮುದ್ರದ ಒಳಗೆ ಭರತನಾಟ್ಯ - 14 ವರ್ಷದ ಬಾಲಕಿಯ ನಾಟ್ಯಪ್ರೇಮಕ್ಕೆ ನೆಟ್ಟಿಗರು ಫಿದಾ!ಮಗುವಿನ ಕೈಯಲ್ಲಿ ಚೀನಾದ ರೈಫಲ್ ಸ್ಕೋಪ್ ಪತ್ತೆ!ರಷ್ಯಾದ ಸೇನೆಗೆ ಸೇರುವಂತೆ ಗುಜರಾತ್ ವಿದ್ಯಾರ್ಥಿಗೆ ಒತ್ತಾಯ3 ಕೋಟಿ ವಿಮೆಗಾಗಿ ತಂದೆಗೆ ಹಾವು ಕಚ್ಚಿಸಿ ಕೊಂದ ಪುತ್ರರು!!'ಬಲವಿಲ್ಲದ ಯೂನಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ವಿಫಲ'– ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ- ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆಮೂಳೆ ಮುರಿದರೂ ವೀಲ್‌ಚೇರ್, ಆಕ್ಸಿಜನ್ ಸಪೋರ್ಟ್‌ನಿಂದ UPSC ಬರೆದ ದಿಟ್ಟೆಈ ವರ್ಷದ ಕೊನೆಯಲ್ಲಿ ಹಣಕಾಸಿಗೆ ಸಂಬಂಧಿಸಿದಂತೆ ಈ ಐದು ಪ್ರಮುಖ ಬದಲಾವಣೆಗಳು ಇವು.!