Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ದಲೈಲಾಮಾ ಅವರ 90ನೇ ಜನ್ಮ ದಿನದ ಲೋಗೋ ಬಿಡುಗಡೆ ಮಾಡಿದ ಶಾಸಕ ಪಪ್ಪಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಸವಣ್ಣನವರ ಕ್ರಾಂತಿ
, ಭಗವಾನ್ ಬುದ್ಧರ ಸಮಾನತೆಯ ಶಾಂತಿ, ಅಂಬೇಡ್ಕರ್ ಅವರ ಜ್ಞಾನ ಈ ಮೂರು ವಿಷಯಗಳು ಸಮ್ಮಿಲನ ಆದಾಗ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವೆಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು.

ನಗರದ ಮುರುಘಾ ಮಠದ ಅನುಭವ ಮಂಟಪದಲ್ಲಿ ಭಾನುವಾರ ಶಿವ ಶರಣ ಮಾದಾರ ಚನ್ನಯ್ಯ ಗುರುಪೀಠ, ಸಂತೋಷ್ ಲಾಡ್ ಫೌಂಡೇಷನ್ ಹಾಗೂ ಇಂಡೋ-ಟಿಬೆಟ್ ಸ್ನೇಹ ಸೊಸೈಟಿ ವತಿಯಿಂದ ಆಯೋಜಿಸಿದ್ದ ಬಸವೇಶ್ವರ ನಾಡಿನಲ್ಲಿ ಬುದ್ದನ ಸ್ಮರಣೆ ಕಾರ್ಯಕ್ರಮದಲ್ಲಿ ಟಿಬೆಟ್ ಧರ್ಮಗುರು ದಲೈಲಾಮಾ ಅವರ 90ನೇ ಜನ್ಮ ದಿನದ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

ವಿಶ್ವಗುರು ಬಸವಣ್ಣ ಸಮಾಜದಲ್ಲಿ ಉತ್ತಮ ಸಂದೇಶಗಳ ಜನರಿಗೆ ಪ್ರವಚನಗಳನ್ನು ಮಾಡುವುದರ ಮೂಲಕ ಸಮ ಸಮಾಜ ನಿರ್ಮಾಣ ಮಾಡುವುದಕ್ಕೆ ಶ್ರಮಿಸಿದ್ದಾರೆ. ಇಡೀ ಪ್ರಪಂಚವೇ ಕೊಂಡಾಡುವಂತ ಭಗವಾನ್ ಬುದ್ಧರವರು ಶಾಂತಿ ಮಂತ್ರ ಪಠಿಸಿದ್ದಾರೆ. ಬಾಬಾ ಸಾಹೇಬ್ ಡಾ. ಬಿಆರ್ ಅವರ ಜ್ಞಾನ ಬಲದಿಂದ ದೇಶಕ್ಕೆ ಸುಸಜ್ಜಿತ ಸಂವಿಧಾನ ಕೊಡುಗೆ ನೀಡಿದ್ದಾರೆ ಮಹನೀಯರ ತತ್ವದ ಆದರ್ಶಗಳ ಅಡಿಯಲ್ಲಿ ಉತ್ತಮ ಪ್ರಜೆಯಾಗಿ ನಾವೆಲ್ಲರೂ ಬದುಕಬೇಕೆಂದು ತಿಳಿಸಿದರು. 

ದಲೈಲಾಮರವರ 90ನೇ ಹುಟ್ಟುಹಬ್ಬವನ್ನು ಚಿತ್ರದುರ್ಗ ನಾಡಿನಲ್ಲಿ ಮಾಡುತ್ತಿರುವುದು ಅತ್ಯಂತ ಸಂತಸದ ವಿಚಾರ. ದುರ್ಗದ ನಾಡಿಗೆ ಬೌದ್ಧ ಬಿಕ್ಕುಗಳು ಕಾಲಿಟ್ಟಿರುವುದರಿಂದ ನಾವೆಲ್ಲರೂ ಧನ್ಯರಾಗಿದ್ದೇವೆ. ಚಿತ್ರದುರ್ಗದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರ ವಿಚಾರಾಗೋಷ್ಠಿಯನ್ನ ಬೃಹತ್ ವೇದಿಕೆಯನ್ನು ಸಿದ್ದಪಡಿಸಿ ಮುಂದಿನ ದಿನಗಳಲ್ಲಿ ಮಾಡಲಾಗುವುದೆಂದು ತಿಳಿಸಿದರು.

 ಈ ಸಂದರ್ಭದಲ್ಲಿ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಹರಿಹರದ ಜಗದ್ಗುರು ಪಂಚಮಸಾಲಿ ಲಿಂಗಾಯತ ಗುರುಪೀಠದ ವಚನಾನಂದ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಮುರುಘಾಮಠದ ಡಾ.ಬಸವಕುಮಾರ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ,

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ, ಆಹಾರ ಮತ್ತು  ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ಶಾಸಕ ಟಿ. ರಘುಮೂರ್ತಿ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ರಾಜ್ಯಸಭಾ ಮಾಜಿ ಸದಸ್ಯ ಹೆಚ್.ಹನುಮಂತಪ್ಪ, ಮುಂಡಗೋಡಿನ ರಿನ್‍ಚೆನ್ ವಾನ್ಗೋ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಇತರರು ಇದ್ದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ