LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಾವಣಗೆರೆ: ಕೆನರಾ ಬ್ಯಾಂಕ್‌ಗೆ 4.15 ಲಕ್ಷ ರೂ. ದಂಡ ..!

 

ದಾವಣಗೆರೆ: ಗೃಹ ಸಾಲದ ಮೂಲ ದಾಖಲೆಗಳನ್ನು ಹಿಂತಿರುಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕೆನರಾ ಬ್ಯಾಂಕ್‌ಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಒಟ್ಟು 4,15,000 ರೂ.ಗಳ ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ.

ನಗರದ ಶ್ರೀಮತಿ ಮಂಜುಳಾ ಕೆ.ಬಿ. ಅವರು ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಮನೆಯ ಮೂಲ ದಾಖಲೆಗಳನ್ನು ಅಡಮಾನವಿಟ್ಟು 21,50,000 ರೂ.ಗಳ ಗೃಹ ಸಾಲ ಪಡೆದಿದ್ದರು. 2024 ರ ಸೆಪ್ಟೆಂಬರ್‌ 11 ರಂದು ಅವರು ಸಾಲದ ಸಂಪೂರ್ಣ ಮೊತ್ತವನ್ನು ಮರುಪಾವತಿಸಿ, ಸಾಲದ ಖಾತೆಯನ್ನು ರದ್ದುಗೊಳಿಸಿರುತ್ತಾರೆ.  ಸಾಲ ತೀರಿಸಿದ ನಂತರ ತಮ್ಮ ಮೂಲ  ದಾಖಲೆಗಳನ್ನು ಹಿಂಪಡೆಯಲು ಬ್ಯಾಂಕ್‌ಗೆ ಮನವಿ ಸಲ್ಲಿಸಿದಾಗ, ಬ್ಯಾಂಕ್ ಅಧಿಕಾರಿಗಳು ಸದರಿ ದಾಖಲೆಗಳು ಕಳೆದುಹೋಗಿವೆ ಎಂದು ತಿಳಿಸಿ ಕೇವಲ ದೃಢೀಕೃತ ಪ್ರತಿಗಳನ್ನು ನೀಡುವುದಾಗಿ ಹೇಳಿದ್ದರು.

ಬ್ಯಾಂಕ್‌ನ ಈ ಬೇಜವಾಬ್ದಾರಿತನದಿಂದ ನೊಂದ ಗ್ರಾಹಕರು, ಅಸಲು ದಾಖಲೆಗಳಿಲ್ಲದೆ ಭವಿಷ್ಯದಲ್ಲಿ ಆಸ್ತಿಯ ಮೌಲ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಜಿಲ್ಲಾ ಗ್ರಾಹಕ ಆಯೋಗದ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕ ಆಯೋಗದ ಅಧ್ಯಕ್ಷರಾದ ಕುಮಾರಿ ಹೆಚ್.ಎನ್. ಮೀನಾ ಹಾಗೂ ಸದಸ್ಯರಾದ ಶ್ರೀ ತ್ಯಾಗರಾಜನ್ ಸಿ.ಎಸ್. ಅವರನ್ನೊಳಗೊಂಡ ಪೀಠವು ಬ್ಯಾಂಕ್‌ನ ಸೇವೆಯಲ್ಲಿ ಗಂಭೀರ ಲೋಪವಿರುವುದನ್ನು ಎತ್ತಿ ಹಿಡಿದಿದೆ. ಆಯೋಗವು ಏಪ್ರಿಲ್‌ 21 ರಂದು ಕಳೆದುಹೋದ ಅಸಲು ದಾಖಲೆಗಳ ಬದಲಾಗಿ ದೂರುದಾರರಿಗೆ 4,00,000 ರೂ.ಗಳನ್ನು ವಾರ್ಷಿಕ ಶೇ. 8 ರಷ್ಟು ಬಡ್ಡಿಯೊಂದಿಗೆ ಪಾವತಿಸಬೇಕು.  ದೂರುದಾರರಿಗೆ ಉಂಟಾದ ಮಾನಸಿಕ ಯಾತನೆ ಹಾಗೂ ದೂರಿನ ವೆಚ್ಚಕ್ಕಾಗಿ ಹೆಚ್ಚುವರಿ 15,000 ರೂ.ಗಳನ್ನು ನೀಡಬೇಕು. ಮತ್ತು ಆದೇಶ ಹೊರಬಂದ ಒಂದು ತಿಂಗಳ ಒಳಗಾಗಿ ಈ ಒಟ್ಟು ಮೊತ್ತವನ್ನು ದೂರುದಾರರಿಗೆ ಪಾವತಿಸಲು ಬ್ಯಾಂಕ್‌ಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್‌ ಹಾಗೂ ಸಹಾಯಕ ಆಡಳಿತಾಧಿಕಾರಿ ಪದ್ಮ ಪಿ.ಎಸ್‌ ರವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026