ದಾವಣಗೆರೆ: ಜನವರಿ 24 ರಂದು ಉದ್ಯೋಗಮೇಳ
ದಾವಣಗೆರೆ :ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಇವರ ವತಿಯಿಂದ ಜನವರಿ 24 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಐ.ಟಿ.ಐ., ಡಿಪ್ಲೋಮಾ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತರು ಕನಿಷ್ಠ 5 ಸ್ವ ವಿವರ ಮತ್ತು ಆಧಾರ್ ನಂಬರ್‍ನೊಂದಿಗೆ ಇಲ್ಲಿ ಭಾಗವಹಿಸಿ ಈ ಉದ್ಯೋಗಮೇಳದ ಸದುಪಯೋಗ ಪಡೆದುಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 7483808321 ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ.ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.