LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೊಲ್ಕತ್ತಾವನ್ನೇ ಬಿಚ್ಚಿ ಬೀಳಿಸಿದ ಡೇ ಕುಟುಂಬದ ಮಿಸ್ಟರಿ ಕೇಸ್‌: ಏನಿದು ಗೊತ್ತಾ ಕೇಸ್‌ …?

ಕೊಲ್ಕತ್ತಾ: ನಗರದಲ್ಲಿ ಬೆಚ್ಚಿಬೀಳಿಸುವಂತ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಮಹಿಳೆಯರು ಮೃತಪಟ್ಟಿದ್ದರೆ, ಅದೇ ಕುಟುಂಬದ ಮೂವರಿಗೆ ಭೀಕರ ಕಾರು ಅಪಘಾತವಾಗಿದೆ. ಸದ್ಯ ಈ ಘಟನೆಯ ಸತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಕೋಲ್ಕತ್ತಾದ ಮನೆಯೊಂದರಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಬುಧವಾರ ಮುಂಜಾನೆ ಇಎಂ ಬೈಪಾಸ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಅದೇ ಕುಟುಂಬದ ಮೂವರು ಪುರುಷರು ಗಾಯೊಂಡಿದ್ದಾರೆ. ಈ ಘಟನೆ ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದ್ದು, ಇದು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ಯೋಜನೆ ರೂಪಿಸಿತ್ತಾ? ಎಂದು ಪೊಲೀಸರು ಶಂಕಿಸಿದ್ದಾರೆ.


ಪೂರ್ವ ಕೋಲ್ಕತ್ತಾದ ಟ್ಯಾಂಗ್ರಾದಲ್ಲಿರುವ ಪ್ರಸುನ್ ಡೇ (48), ಪ್ರಣಯ್ ಡೇ (44) ಸಹೋದರರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಪ್ರಸುನ್ ಡೇ, ಪ್ರಣಯ್ ಡೇ ಪ್ರಣಯ್ ಅವರ ಮಗ ಪ್ರತಿಪ್ ಡೇ ಪ್ರಯಾಣಿಸುತ್ತಿದ್ದ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪವಾಡ ಸದೃಶ್ಯವಾಗಿ ಅವರು ಬದುಕುಳಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿರುವ ಪ್ರಣಯ್ ಡೇ ತಾವು ಆತ್ಮಹತ್ಯೆಗೆ ಯತ್ನಿಸುತ್ತಿರುವುದಾಗಿಯೂ, ಉದ್ದೇಶಪೂರ್ವಕವಾಗಿ ಕಾರನ್ನು ಮೆಟ್ರೋ ಕಂಬಕ್ಕೆ ಡಿಕ್ಕಿ ಹೊಡೆದಿರುವುದಾಗಿಯೂ, ತನ್ನ ಮನೆಯಲ್ಲಿ ಮನೆಯಲ್ಲಿ ಮೂವರು ಮೃತಪಟ್ಟಿರುವ ಬಗ್ಗೆ ಹೇಳಿದ್ದಾರೆ.


ನಂತರ ಅವರ ಮನೆಗೆ ಹೋಗಿ ಪೊಲೀಸರು ಪರಿಶೀಲನೆ ನಡೆಸಿದಾಗ ಮೊದಲ ಮಹಡಿಯಲ್ಲಿ, ಶವಗಳು ಪತ್ತೆಯಾಗಿವೆ. ಇಬ್ಬರ ಗಂಟಲಿನ ಮೇಲೆ ಸೀಳು ಗಾಯಗಳಾಗಿದ್ದು, ಭಾರೀ ರಕ್ತಸ್ರಾವದ ನಂತರ ಮೃತಪಟ್ಟಿದ್ದಾರೆ. 14 ವರ್ಷದ ಬಾಲಕಿಯ ಎದೆ, ಕಾಲುಗಳು, ತುಟಿ ಮತ್ತು ತಲೆಯ ಮೇಲೆ ಗಾಯಗಳಾಗಿವೆ. ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಡಿಯೋಗ್ರಾಫರ್ ಮತ್ತು ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.


ಆಸ್ಪತ್ರೆಗೆ ದಾಖಲಾದ ಮೂವರು ಜನರ ವೀಡಿಯೊ ಮತ್ತು ಲಿಖಿತ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಕುಟುಂಬ ಸದಸ್ಯರು ಉದ್ದೇಶಪೂರ್ವಕವಾಗಿಯೇ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ವ್ಯಾಪಾರ ನಡೆಸುತ್ತಿದ್ದ ಕುಟುಂಬವು ಆರ್ಥಿಕ ಸಂಕಷ್ಟದಲ್ಲಿತ್ತು ಇದು ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಊಹಿಸಲಾಗಿದೆ. ಡೇ ಸಹೋದರರು ಎರಡು ವರ್ಷಗಳಿಂದ ತಮ್ಮ ವ್ಯಾಪಾರ ಪರವಾನಗಿಯನ್ನು ನವೀಕರಿಸಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಕರ್ನಾಟಕ, ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಸ್ಥಗಿತಕಳೆದ ತಿಂಗಳು ಗುಜರಿ ಮಾರಿ 800 ಕೋಟಿ ರೂಪಾಯಿ ಗಳಿಸಿದ ಕೇಂದ್ರ!ರಾತ್ರಿ ಮಲಗುವ ಮುನ್ನ ಇದನ್ನ ಮುಖಕ್ಕೆ ಹಚ್ಚಿದರೆ 10 ವರ್ಷ ವಯಸ್ಸು ಕಡಿಮೆಯಾಗುತ್ತೆಆತ್ಮಗಳು ಎಲ್ಲಿ ವಾಸವಾಗಿರುತ್ತದೆ ಹಾಗೂ ಯಾರಿಗೆ ತೊಂದರೆ ಕೊಡುತ್ತದೆ ಎಂಬುದು ತಿಳಿದಿದೆಯೇ ನಿಮಗೆ ?ಹಿರೆಮದಕರಿನಾಯಕರ ಧರ್ಮಪತ್ನಿ ಗಂಡೋಬಳವ್ವ ನಾಗತಿ ಅವರ ಚಿತ್ರ ಅನಾವರಣ.!ವಚನ.: -ಕನ್ನಡಿಕಾಯಕದ ಅಮ್ಮಿದೇವಯ್ಯRSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್