ನವದೆಹಲಿ: ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ Delhi Capitals ಹಾಗೂ Punjab Kings ನಡುವಿನ IPL 2026 ಪಂದ್ಯಕ್ಕೂ ಮುನ್ನವೇ ಡೆಲ್ಲಿ ತಂಡದ ನೆಟ್ ಬೌಲರ್ ಸಾಹಿಲ್ ಪರಾಕ್ ಅಭ್ಯಾಸದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಶುಕ್ರವಾರ ನಡೆದ ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಸಾಹಿಲ್ ನೆಲಕ್ಕುರುಳಿದ್ದು, ತಕ್ಷಣ ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಿದರೂ ಸ್ಥಿತಿ ಚೇತರಿಸದ ಹಿನ್ನೆಲೆಯಲ್ಲಿ ಅಂಬುಲೆನ್ಸ್ ಮೂಲಕ ಅವರನ್ನು ಸ್ಟ್ರೆಚರ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯದ ತೀವ್ರತೆ ಕುರಿತು ತಂಡದಿಂದ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಮೈದಾನದಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸದ್ಯ ಡೆಲ್ಲಿ ತಂಡ 6 ಪಂದ್ಯಗಳಲ್ಲಿ 3 ಗೆಲುವು ಮತ್ತು 3 ಸೋಲಿನೊಂದಿಗೆ 6 ಅಂಕಗಳನ್ನು ಪಡೆದು ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದು, ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ.