Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಿಜೆಪಿ ಮಾಡಿದರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೇ?: ಡಿಸಿಎಂ ಡಿ.ಕೆ. ಶಿವಕುಮಾರ್

 

ಬೆಂಗಳೂರು:

"ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? 'ತಾನು ಕಳ್ಳ, ಪರರನ್ನು ನಂಬ' ಎನ್ನುವಂತಹ ಸ್ಥಿತಿ ಬಿಜೆಪಿಯದ್ದು. ಕರ್ನಾಟಕವೂ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ ಇಲ್ಲೆಲ್ಲಾ ಏನು ಮಾಡಿತ್ತು ಬಿಜೆಪಿ? ಆಯಾಯ ಪರಿಸ್ಥಿತಿಗೆ ಏನು ಬೇಕು ಅದು ಕಾಲ, ಕಾಲಕ್ಕೆ ನಡೆಯುತ್ತದೆ. ಕಾಂಗ್ರೆಸ್‌ ಪಕ್ಷ ಸಮುದ್ರ ಇದ್ದಂತೆ" ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ನುಡಿದರು.

ಸದಾಶಿವನಗರ ನಿವಾಸ ಹಾಗೂ ಈಜೀಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಕಾಂಗ್ರೆಸ್‌ ತನ್ನ ತಪ್ಪುಗಳನ್ನು ಮುಚ್ಚಿಹಾಕಲು ಆಪರೇಷನ್‌ ಹಸ್ತ ನಡೆಸುತ್ತಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು,
"ಉತ್ತಮ ರಾಜಕೀಯ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು. ಒಳ್ಳೆಯದು, ಕೆಟ್ಟದ್ದು ವ್ಯಕ್ತಿಗತವಾದ ಆಲೋಚನೆ. ಪ್ರಜಾಪ್ರಭುತ್ವ ಉಳಿಯಬೇಕು, ಈ ದೇಶಕ್ಕೆ, ರಾಜ್ಯಕ್ಕೆ ಉತ್ತಮ ಸೇವೆ ಸಲ್ಲಿಸಬೇಕು ಎಂಬುದು ಯಾರ್ಯಾರಿಗೆ ಇದೆಯೋ ಅಂತಹ ನಾಯಕರು ವೈಯಕ್ತಿಕ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅದನ್ನ ನಾವು ನಿರ್ಬಂಧ ಮಾಡಲು ಆಗುತ್ತದೆಯೇ?" ಎಂದು ಕೇಳಿದರು.

"ಈ ಹಿಂದೆ ಯಾರ್ಯಾರು ಏನ್‌ ಮಾತನಾಡಿದರು, ಏನನ್ನು ಮಾತನಾಡಲು ಬಂದಿದ್ದರು ಅದನ್ನೆಲ್ಲಾ ಈಗ ಬಿಡಿಸಿ ಹೇಳಬೇಕೆ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೀವು ಈ ರೀತಿ ಇರಬೇಕು, ಈ ರೀತಿ ತೀರ್ಮಾನ ತೆಗದುಕೊಳ್ಳಬೇಕು ಎಂದು ನಿರ್ದೇಶನ ಮಾಡಲು ಆಗುವುದಿಲ್ಲ. ವಿಪಕ್ಷಗಳು ಏನು ಬೇಕಾದರೂ ಆರೋಪ ಮಾಡಲಿ ನಮಗೆ ತೊಂದರೆ ಇಲ್ಲ" ಎಂದು ಹೇಳಿದರು.

23 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಿದಾಗ "ಮೊದಲು ಅವರ ನಾಯಕರು ಯಾರು ಎಂದು ತೀರ್ಮಾನ ಮಾಡಿಕೊಂಡು ಆಮೇಲೆ ಹೋರಾಟ ಮಾಡಲಿ" ಎಂದು ಛೇಡಿಸಿದರು.

ಈಜಿಪುರ ಮೇಲ್ಸೇತುವೆ ಕಾಮಗಾರಿ ಕುರಿತು ಕೇಳಿದಾಗ, "ಈ ಮೇಲ್ಸೇತುವೆ 3ಕಿ.ಮೀ ಉದ್ದ ಇದ್ದು, ಬಹಳ ವರ್ಷಗಳಿಂದ ಕಾಮಗಾರಿ ನಡೆಯುತ್ತಿದೆ. 2017ರಲ್ಲಿ ಈ ಯೋಜನೆ ಕಾಮಗಾರಿ ಆರಂಭವಾಗಿದ್ದು, ಕೇವಲ 35% ಮಾತ್ರ ಕೆಲಸ ಆಗಿದೆ. ಕಾಮಗಾರಿ ಮಾಡುತ್ತಿದ್ದ ಗುತ್ತಿಗೆ ಕಂಪನಿ ಸಮಸ್ಯೆ ಆಗಿ ಕೆಲಸ ನಿಂತಿದೆ. ಅವರಿಗೆ ನೊಟೀಸ್ ನೀಡಿ, ಟೆಂಡರ್ ಅನ್ನು ರದ್ದು ಮಾಡಿದ್ದೇವೆ. ಮತ್ತೆ ಹೊಸ ಟೆಂಡರ್ ಕರೆಯಲಾಗಿದ್ದು, ಬೇರೆಯವರು ಆಸಕ್ತಿ ತೋರುತ್ತಿಲ್ಲ. ಸಿಂಗಲ್ ಟೆಂಡರ್ ಆಗಿದ್ದು 19% ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ವಾಸ್ತವಾಂಶ ಅರಿಯಲು ಖುದ್ದಾಗಿ ನಾನು ಹಾಗೂ ರಾಮಲಿಂಗಾ ರೆಡ್ಡಿ ಅವರು ಬಂದಿದ್ದೇವೆ. ನಾನು ಸಚಿವನಾಗಿ ನಂತರ ರಾಮಲಿಂಗಾ ರೆಡ್ಡಿ ಅವರು ಈ ಕಾಮಗಾರಿ ಪೂರ್ಣಗೊಳಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಕಾಮಗಾರಿಯನ್ನು ಆದ್ಯತೆ ಮೇರೆಗೆ ತೆಗೆದುಕೊಳ್ಳುತ್ತೇವೆ. 100 ಕೋಟಿ ಹೆಚ್ಚುವರಿ ಹಣ ಬೇಕಾಗಿದ್ದು, ನಾವೇ ಈ ಯೋಜನೆ ಹೆಚ್ಚುವರಿ ಹಣ ನೀಡಬಹುದೇ ಅಥವಾ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಬಹುದೇ ಎಂದು ಚರ್ಚೆ ಮಾಡುತ್ತೇವೆ" ಎಂದು ತಿಳಿಸಿದರು.

ಕೇವಲ ಒಬ್ಬರೇ ಟೆಂಡರ್ ನಲ್ಲಿ ಭಾಗವಹಿಸಿದ್ದಾರೆ ಎಂಬ ಪ್ರಶ್ನೆಗೆ, "ಒಬ್ಬರು ಮಾಡಿದ ಕೆಲಸಕ್ಕೆ ಬೇರೆಯವರು ಕೈ ಹಾಕಲು ಇಚ್ಛಿಸುವುದಿಲ್ಲ. ಹೀಗಾಗಿ ಕೇವಲ ಒಬ್ಬರು ಟೆಂಡರ್ ನಲ್ಲಿ ಭಾಗವಹಿಸಿದ್ದಾರೆ" ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ