LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡಿಸಿಎಂ ಡಿಕೆ ಶಿವಕುಮಾರ್ ಕಚೇರಿ ಸ್ಫೋಟಿಸುವುದಾಗಿ ಬಾಂಬ್​ ಬೆದರಿಕೆ ಸಂದೇಶ

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಅವರ ಕಚೇರಿ ಹಾಗೂ ದೇವನಹಳ್ಳಿಯಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಬಾಂಬ್​ ಸ್ಫೋಟಿಸುವುದಾಗಿ (Bomb Threat) ಇ-ಮೇಲ್​ ಸಂದೇಶ ಬಂದಿದೆ. ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಪೊಲೀಸರು, ಬಾಂಬ್​ ನಿಷ್ಕ್ರಿಯ ದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಪರಿಶೀಲನೆ ನಡೆಸಿದರು. ಯಾವುದೇ ಬಾಂಬ್​ ಪತ್ತೆಯಾಗದ ಹಿನ್ನೆಲೆಯಲ್ಲಿ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂದು ಗೊತ್ತಾಗಿದೆ. ಬಾಂಬ್​ ಬೆದರಿಕೆ ಸಂದೇಶದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

[email protected] ಮೇಲ್‌ನಿಂದ ಬಾಂಬ್​ ಬೆದರಿಕೆ ಸಂದೇಶ ಬಂದಿದೆ. ಟರ್ಮಿನಲ್ 1, 2ರಲ್ಲಿ ಬಾಂಬ್ ಇಟ್ಟಿದ್ದು ಎಲ್ಲರನ್ನೂ ತೆರವುಗೊಳಿಸಿ. ಏಕಕಾಲದಲ್ಲಿ ಡಿಸಿಎಂ ಕಚೇರಿ, ಏರ್‌ಪೋರ್ಟ್‌ನಲ್ಲಿ ಬ್ಲಾಸ್ಟ್‌ ಆಗಲಿದೆ ಎಂದು ಮೇಲ್​ನಲ್ಲಿ ಬರೆಯಲಾಗಿತ್ತು. ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026