LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ

ಬೆಂಗಳೂರು: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ರಿಲೀಫ್ ನೀಡಿದೆ.

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಮ್ಮೆ ಗಡುವು ವಿಸ್ತರಿಸಲಾಗಿದ್ದು, ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸತತ 8ನೇ ಬಾರಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿದಂತಾಗಿದೆ.

ಈ ಹಿಂದೆ ಜನವರಿ 31ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಸಾರಿಗೆ ಇಲಾಖೆ ಮತ್ತೆ ಮಾರ್ಚ್ 31ರವರೆಗೆ ಗಡುವು ವಿಸ್ತರಣೆ ಮಾಡಿದೆ. ಈ ಮೂಲಕ 8 ತಿಂಗಳ ಕಾಲ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆಯಾಗಿದೆ.

ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳಿವೆ. ಇದರಲ್ಲಿ 58 ಲಕ್ಷ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯಾಗಿವೆ. ಹೀಗಾಗಿ ಇನ್ನುಳಿದ ವಾಹನ ಸವಾರರು ತಮ್ಮ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದೇ ಇರುವುದು ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಅಮಾನತುಗೊಂಡ ಬಳ್ಳಾರಿ ಎಸ್‌ಪಿ ಪವನ್‌ ನಿಜೂರು ಆತ್ಮಹತ್ಯೆಗೆ ಯತ್ನ.!ಛತ್ತೀಸ್‌ಗಢದಲ್ಲಿ 14 ನಕ್ಸಲರನ್ನು ಎನ್‌ಕೌಂಟರ್‌ ಮಾಡಿದ ಭದ್ರತಾ ಪಡೆಬಳ್ಳಾರಿ ಗಲಭೆಗೆ ತಲೆದಂಡ; ಅಧಿಕಾರ ಸ್ವೀಕರಿಸಿದ 1 ದಿನಕ್ಕೆ ಎಸ್ಪಿ ಪವನ್ ನೆಜ್ಜೂರು ಸಸ್ಪೆಂಡ್ಬಸ್ ಅಗ್ನಿ ದುರಂತಗಳ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಫುಲ್ ಅಲರ್ಟ್ - ಸುರಕ್ಷತೆ ವ್ಯವಸ್ಥೆಗೆ ಸಜ್ಜುಟೆಂಪೋ ಡ್ರೈವರ್ ಆಗಿದ್ದ ಶ್ರವಣ್ ಕುಮಾರ್ ವಿಮಾನ ಸಂಸ್ಥೆ ನಡೆಸುತ್ತಿರುವ ಸ್ಪೂರ್ತಿದಾಯಕ ಕಥೆವೃಷಭ ರಾಶಿಫಲ 2026: ಈ ವರ್ಷ ವೃಷಭ ರಾಶಿಯವರಿಗೆ ಏನೆಲ್ಲಾ ಶುಭವಿದೆ?ವೃತ್ತಿಪರ  ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ.!ಇಂದು ಭದ್ರಾ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರುದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 03-01-2026 .!