LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪತ್ರಕರ್ತ ಚನ್ನಬಸವಯ್ಯ ನಿಧನ: ವೈದ್ಯಕೀಯ ಕಾಲೇಜಿಗೆ ದೇಹದಾನ

 

ಚಿತ್ರದುರ್ಗ: ಹೊಳಲ್ಕೆರೆ ರಸ್ತೆಯ ನೆಹರು ನಗರ ನಿವಾಸಿ, ಪತ್ರಕರ್ತ ಚನ್ನಬಸವಯ್ಯ(46) ಗುರುವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಚನ್ನಬಸವಯ್ಯ ಅವರ ಇಚ್ಚೆಯಂತೆ, ಪಾರ್ಥೀವ ಶರೀರವನ್ನು ನಗರದ ಬಸವೇಶ್ವರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾನವಾಗಿ ನೀಡಲಾಯಿತು.

ಪತ್ರಿಕೋದ್ಯಮ ಹಾಗೂ ಕಾನೂನು ಪದವಿ ಪಡೆದಿದ್ದ ಚನ್ನಬಸಯ್ಯ ಆಕಾಶವಾಣಿ, ಡಿಡಿ ವಾಹಿನಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಕಾರಣ ಮೇ.28 ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ನಿಧನ ಹೊಂದಿದರು. ಮೃತರು ತಾಯಿ, ಸಹೋಧರ ಸೇರಿದಂತೆ ಅನೇಕ ಬಂಧುಗಳನ್ನು ಅಗಲಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಮೃತ ಚನ್ನಬಸವಯ್ಯ ಅವರ ಅಗಲಿಕೆ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂತಾಪ ಸಭೆ ನಡೆಯಿತು.ಈ ವೇಳೆ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾತನಾಡಿ, ಚನ್ನಬಸಯ್ಯ ಅವರು ಸುದ್ದಿಗಳ ವಿಚಾರದಲ್ಲಿ ಎಂದೂ ಮೈ ಮರೆಯುತ್ತಿರಲಿಲ್ಲ ಎಂದು ಸ್ಮರಿಸಿದರು. ತಮ್ಮ ವೃತ್ತಿ ಬದುಕಿನ ಜೊತೆಗೆ ಬದುಕಿನಲ್ಲೂ ಸಾರ್ಥಕತೆ ಮೂಡುವ ಕೆಲಸ ಮಾಡಿರುವುದು ಅವರ ಸಾವಿನಲ್ಲಿ ಗೊತ್ತಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ದೇಹದಾನ ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ ಮಾತನಾಡಿ, ಪತ್ರಕರ್ತರ ಸಂಘದ ಸದ್ಯರಾಗಿದ್ದ ಚನ್ನಬಸವಯ್ಯ ಅವರ ಅಗಲಿಕೆ ಎಲ್ಲರಿಗೂ ದುಃಖ ತಂದಿದೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

ಹಿರಿಯ ಪತ್ರಕರ್ತ ಶ.ಮಂಜುನಾಥ್ ಮಾತನಾಡಿ, ಕಾನೂನು ಪದವಿ ಪಡೆದು, ಪತ್ರಕೋದ್ಯಮಕ್ಕೂ ಬಂದ ಚನ್ನಬಸವಯ್ಯ ಆರಂಭದಲ್ಲಿ ಬಹಳ ನಿಷ್ಠುರವಾಗಿ ನಡೆದುಕೊಳ್ಳುತ್ತಿದ್ದರು. ಆದರೆ, ಕಳೆದ ಆರು ತಿಂಗಳಿಂದ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿ ಮಾಗಿದಂತೆ ಕಂಡು ಬರುತ್ತಿದ್ದರು ಎಂದು ಸ್ಮರಿಸಿದರು.

ಪತ್ರಕರ್ತರಾದ ಎಂ.ಎನ್.ಅಹೋಬಲಪತಿ, ತಿಪ್ಪೇಸ್ವಾಮಿ ನಾಕೀಕೆರೆ, ರಾಜಶೇಖರ್, ಮಾಲತೇಶ್ ಅರಸ್ ಮಾತನಾಡಿದರು. ಚನ್ನಬಸವಯ್ಯ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಹರಿಯಬ್ಬೆ ಹೆಂಜಾರಪ್ಪ, ಬ್ರಹ್ಮಗಿರಿ ಶ್ರೀನಿವಾಸ್, ಗೌನಹಳ್ಳಿ ಗೋವಿಂದಪ್ಪ, ವಿನಾಯಕ ತೊಡರನಾಳು, ಕುಮಾರಸ್ವಾಮಿ, ಚಳ್ಳಕೆರೆ ವೀರೇಶ್, ಸುರೇಶ್ ಪಟ್ಟಣ್ ಮತ್ತಿತರರಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026