LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇರಳದ ಮತ್ತೊಂದು ದೇಗುಲಕ್ಕೆ ಡಿಬಾಸ್‌ ಭೇಟಿ!

ಕಣ್ಣೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಅಭಿನಯದ ‘ದಿ ಡೆವಿಲ್’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ನಟ ದರ್ಶನ್‌ ದೇವರ ಮೊರೆ ಹೋಗಿದ್ದಾರೆ. ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ ನೀಡಿದ್ದಾರೆ.

ಆತ್ಮೀಯ ಧನ್ವೀರ್ ಗೌಡ ಹಾಗೂ ಕುಟುಂಬದ ಜೊತೆಗೆ ನಟ ದರ್ಶನ್ ಕೊಟ್ಟಿಯೂರು ದೇವಾಲಯಕ್ಕೆ ದರ್ಶನ್ ಭೇಟಿ ನೀಡಿದ್ದಾರೆ. ದಕ್ಷಿಣ ಕಾಶಿ ಎಂದೇ ಈ ಸ್ಥಳವನ್ನು ಕರೆಯಲಾಗುತ್ತದೆ. ವಿಜಯಲಕ್ಷ್ಮಿ, ಧನ್ವೀರ್ ಅವರುಗಳ ಜೊತೆಗೆ ನಟ ದರ್ಶನ್ ಈ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕೇರಳದ ಕೊಣ್ಣುರು ಸಮೀಪದಲ್ಲಿರುವ ಕೊಟ್ಟಿಯೂರು ಇದು ಶಿವ ದೇವಾಲಯವಾಗಿದ್ದು, ಈ ದೇವಸ್ಥಾನ ತೆರೆದಿರುವುದು ವರ್ಷಕ್ಕೆ 30 ದಿನಗಳು ಮಾತ್ರ.

ಕೊಟ್ಟಿಯೂರಿನಲ್ಲಿ ಎರಡು ದೇವಾಲಯಗಳಿಗೆ ಅಕ್ಕರೆ ಕೊಟ್ಟಿಯೂರು ಮತ್ತು ಇಕ್ಕರೆ ಕೊಟ್ಟಿಯೂರು ಎಂದು. ಈಗ ದರ್ಶನ್ ಭೇಟಿ ನೀಡಿರುವುದು ಅಕ್ಕರೆ ಕೊಟ್ಟಿಯೂರು, ಇಲ್ಲಿ ವೈಶಾಖ ಮಾಸದಲ್ಲಿ ಮಾತ್ರ ಪೂಜೆ ನಡೆಯುತ್ತದೆ. ಇದೇ ಕಾರಣಕ್ಕೆ ಜೂನ್ 8 ರಿಂದ ಜುಲೈ 4 ರವರೆಗೆ ಮಾತ್ರ ಈ ದೇವಾಲಯ ತೆರೆದಿರುತ್ತದೆ. ಜೂನ್ 30ರ ಬಳಿಕ ಮಹಿಳೆಯರ ಪ್ರವೇಶಕ್ಕೆ ನಿಷೇಧ ಹೇರಲಾಗುತ್ತದೆ. ಧಾರ್ಮಿಕ ಮಹತ್ವ ಹೊಂದಿರುವ ದೇವಾಲಯ ಇದಾಗಿದ್ದು, ಈಗ ವಿಶೇಷ ಪೂಜೆಗಳು ನಡೆಯುತ್ತಿದ್ದು ದರ್ಶನ್, ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಇದೇ ವರ್ಷ ಮಾರ್ಚ್ ತಿಂಗಳಲ್ಲಿ ಕೇರಳದ ಕಣ್ಣೂರಿನ ಬಳಿ ಪಡೆಕಾವು ಶ್ರೀ ಭಗವತಿ ದೇವಾಲಯಕ್ಕೆ ನಟ ದರ್ಶನ್ ಭೇಟಿ ನೀಡಿದ್ದರು. ಈ ದೇವಾಲಯದಲ್ಲಿ ಶತ್ರು ವಿನಾಶ ಪೂಜೆಯನ್ನು ದರ್ಶನ್ ಅವರು ಮಾಡಿಸಿದ್ದರು. ಈಗ ಕೇರಳದ ಮತ್ತೊಂದು ಧಾರ್ಮಿಕ ಮಹತ್ವದ ದೇವಾಲಯವಾದ ಕೊಟ್ಟಿಯೂರು ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026