Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗ್ರಾಮವಾರು ಹಾಗೂ ಸರ್ವೇ ನಂಬರ್ ಆಧಾರಿತ ಭೌತಿಕ ಸಮೀಕ್ಷೆಗೆ ನಿರ್ಧಾರ: ಸಿಎಂ

ಬೆಂಗಳೂರು: ಕಸ್ತೂರಿರಂಗನ್ ವರದಿಯ ನ್ಯೂನತೆಗಳನ್ನು ಪರಿಶೀಲಿಸಿ ಅಗತ್ಯ ಮಾರ್ಪಾಡುಗಳನ್ನು ಸೂಚಿಸಲು ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ಹಾಗೂ ಕೇಂದ್ರ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ರಾಜ್ಯ ವಿಧಾನ ಮಂಡಲದ ಉಭಯ ಸದನಗಳಲ್ಲಿ  ಒಮ್ಮತದಿಂದ  ನಿರ್ಣಯವನ್ನು ಅಂಗೀಕರಿಸಲಾಯಿತು.
ಕರಡು ಅಧಿಸೂಚನೆ ಕುರಿತ ಚರ್ಚೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಪ್ರಸ್ತುತ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯನ್ನು ಯಥಾಸ್ಥಿತಿಯಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ನಿವೃತ್ತ ನ್ಯಾಯಾಧೀಶರ ನೇತೃತ್ವದ ಈ ಸಮಿತಿಯಲ್ಲಿ ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳು, ರೈತ ಪ್ರತಿನಿಧಿಗಳು, ಅರಣ್ಯ-ಪರಿಸರ ತಜ್ಞರು, ಉದ್ಯಮ ಕ್ಷೇತ್ರ ಹಾಗೂ ಶೈಕ್ಷಣಿಕ ಸಂಸ್ಥೆಗಳ ಪರಿಣಿತರು ಇರಲಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಸಮಿತಿಗಳನ್ನು ರಚಿಸಲಾಗುತ್ತದೆ.
ಉಪಗ್ರಹ ಆಧಾರಿತ ಸಮೀಕ್ಷೆಯ ಗೊಂದಲಗಳನ್ನು ನಿವಾರಿಸಲು ಗ್ರಾಮವಾರು ಹಾಗೂ ಸರ್ವೇ ನಂಬರ್ ಆಧಾರಿತ ಭೌತಿಕ ಸಮೀಕ್ಷೆ ನಡೆಸಲಾಗುವುದು. ಕೃಷಿ, ತೋಟಗಾರಿಕೆ, ಜನವಸತಿ ಪ್ರದೇಶ ಮತ್ತು ಮೂಲಸೌಕರ್ಯಗಳನ್ನು ಪ್ರತ್ಯೇಕಿಸಿ ವೈಜ್ಞಾನಿಕ ನಕ್ಷೆ ಸಿದ್ಧಪಡಿಸಲಾಗುವುದು.
ಭೌತಿಕ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಒಂದು ವರ್ಷದ ಕಾಲಾವಕಾಶ ನೀಡುವಂತೆ ಹಾಗೂ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸದಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು.
ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಲು ಸರ್ವಪಕ್ಷ ನಿಯೋಗ ಒಯ್ಯಲಾಗುವುದು. ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರ ವಾದಿಸಲು ಹಿರಿಯ ವಕೀಲರನ್ನು ನೇಮಿಸಲಾಗುವುದು.
ಸದನವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಶ್ಚಿಮ ಘಟ್ಟದ ಜೀವವೈವಿಧ್ಯ, ಪರಿಸರ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸುವುದು ಸರ್ಕಾರದ ಬದ್ಧತೆಯಾಗಿದೆ. ಅದೇ ಸಮಯದಲ್ಲಿ ತಲೆತಲೆಮಾರಿನಿಂದ ಅಲ್ಲಿಯೇ ಬದುಕು ಕಟ್ಟಿಕೊಂಡಿರುವ ರೈತರು, ತೋಟಗಾರರು ಮತ್ತು ಆದಿವಾಸಿಗಳನ್ನು ತೆರವುಗೊಳಿಸುವುದು ಅಥವಾ ಕಿರುಕುಳ ನೀಡುವುದು ಸರ್ಕಾರದ ಉದ್ದೇಶವಲ್ಲ. ಕಾಡು ಉಳಿಯಬೇಕು, ಪರಿಸರ ಸಂರಕ್ಷಣೆಯಾಗಬೇಕು ಮತ್ತು ರೈತರೂ ನೆಮ್ಮದಿಯಿಂದ ಬದುಕಬೇಕು ಎಂಬುದು ನಮ್ಮ ನಿಲುವು ಎಂದು ಹೇಳಿದರು.
ಹೊಸದಾಗಿ ಅರಣ್ಯ ಒತ್ತುವರಿ ಮಾಡುವುದನ್ನು ಸಂಪೂರ್ಣವಾಗಿ ತಡೆಯಲಾಗುವುದು.
ಕಾಡಂಚಿನ ನಿವಾಸಿಗಳು ತಮ್ಮ ಬಳಿಯಿರುವ ಬಂದೂಕುಗಳನ್ನು ನವೆಂಬರ್ ೧ರೊಳಗೆ ಪೊಲೀಸ್ ಠಾಣೆಗಳಿಗೆ ಒಪ್ಪಿಸಬೇಕು. ಪರವಾನಗಿ ಪಡೆದವರಿಗೆ ಹಿಂತಿರುಗಿಸಲಾಗುವುದು, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಮತ್ತು ಆನೆಗಳ ಚಲನವಲನದ ಮೇಲೆ ನಿಗಾ ಇಡಲು ಆಧುನಿಕ ತಂತ್ರಜ್ಞಾನ ಹಾಗೂ ಕ್ಯಾಮೆರಾಗಳನ್ನು ಬಳಸಲಾಗುವುದು.
ಪಕ್ಷಭೇದ ಮರೆತು ರಾಜ್ಯದ ಮತ್ತು ರೈತರ ಹಿತರಕ್ಷಣೆಗಾಗಿ ಸರ್ಕಾರ ರಾಜಕೀಯ ರಹಿತವಾಗಿ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST