LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉತ್ತಮ ಸಂಬಳದ ಕೆಲಸ ತ್ಯಜಿಸಿ ಐಪಿಎಸ್ ಅಧಿಕಾರಿಯಾದ ದೀಪಿಕಾ ಅಗರ್ವಾಲ್

ಸಿಕ್ಕಿಂ : ಕೆಲವೊಮ್ಮೆ ನಮ್ಮ ಕನಸಿಗಾಗಿ ಕೆಲವೊಂದನ್ನು ತ್ಯಾಗ ಮಾಡಬೇಕಾಗುತ್ತದೆ. ಹೀಗೆ ತಾನು ಐಪಿಎಸ್ ಅಧಿಕಾರಿಯಾಗುವ ಕನಸಿಗಾಗಿ ಉತ್ತಮ ಸಂಬಳದ ಕೆಲಸವನ್ನು ತೊರೆದ ದೀಪಿಕಾ ಅಗರ್ವಾಲ್ ಅವರ ಯಶೋಗಾಥೆ ಇದು.

ಸಿಕ್ಕಿಂ ಮೂಲದ ದೀಪಿಕಾ ಅಗರ್ವಾಲ್ ಅವರು, ತಾಶಿ ನಾಮ್ಗ್ಯಾಲ್ ಅಕಾಡೆಮಿ (TNA) ಮತ್ತು ಮೇಯೊ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಮುಗಿಸಿದರು. ಬಳಿಕ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್‌ನಿಂದ ಬಿ.ಕಾಂ ಪದವಿ ಪಡೆದರು. ನಂತರ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಿಂದ ಎಂಬಿಎ ಪದವಿ ಪಡೆದರು.

ಬಳಿಕ ಬಾಕ್ಲೇðಸ್‌ನಲ್ಲಿ ಹಣಕಾಸು ವಿಶ್ಲೇಷಕರಾಗಿ ಎರಡು ವರ್ಷ ಮತ್ತು ಓಮಿದ್ಯಾರ್ ನೆಟ್‌ವರ್ಕ್ ಇಂಡಿಯಾದಲ್ಲಿ ಹೂಡಿಕೆ ಸಲಹೆಗಾರರಾಗಿ ಒಂದು ವರ್ಷ ಕೆಲಸ ಮಾಡಿದರು. ದೇಶ ಸೇವೆ ಮಾಡುವುದು ದೀಪಿಕಾ ಅವರ ಬಹುದಿನದ ಕನಸಾಗಿತ್ತು.

ಹೀಗಾಗಿ ದೀಪಿಕಾ ಅವರು ಕಾರ್ಪೊರೇಟ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾಗಲೇ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ಆರಂಭಿಸಿದರು. ಆದರೆ 2019ರಲ್ಲಿ, ಕೆಲಸ ಮತ್ತು ಪರೀಕ್ಷೆಯ ತಯಾರಿ ಎರಡನ್ನೂ ನಿಭಾಯಿಸುವುದು ಕಷ್ಟವಾಯಿತು. ಬಳಿಕ ತಮ್ಮ ಉತ್ತಮ ಸಂಬಳದ ಕೆಲಸವನ್ನು ತ್ಯಜಿಸಿ, ದೆಹಲಿಗೆ ಸ್ಥಳಾಂತರಗೊಂಡು ಪರೀಕ್ಷೆಗೆ ತಯಾರಿ ನಡೆಸಿದರು.

ದೀಪಿಕಾ ಅಗರ್ವಾಲ್ ಅವರು ವಾಣಿಜ್ಯ ಮತ್ತು ಅಕೌಂಟೆನ್ಸಿ ವಿಷಯವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡಿದರು. 2022ರಲ್ಲಿ ಮೂರನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದ ಅವರು, 151ನೇ ಅಖಿಲ ಭಾರತ ರ‍್ಯಾಂಕ್ ಪಡೆದು ಐಪಿಎಸ್ ಅಧಿಕಾರಿಯಾಗುತ್ತಾರೆ. ಈ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಳ್ಳುತ್ತಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026