LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡಾ. ಮೇಘ ಜಿ. ಹೆಚ್. ಅವರಿಗೆ ವೈದ್ಯಕೀಯ ಎಐ ಪದವಿ

 

ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಸಿ.ಎಂ.ಸಿ.ಆರ್.ಐ.) ಅರಿವಳಿಕೆ ವಿಭಾಗದ ಮುಖ್ಯಸ್ಥರಾದ ಡಾ. ಮೇಘ ಜಿ. ಹೆಚ್. ಅವರು ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ ವೈದ್ಯಕೀಯ AI (Artificial Intelligence) ಕೋರ್ಸ್‌ನಲ್ಲಿ ಪದವಿ ಪಡೆದು ಸಾಧನೆ ಮಾಡಿದ್ದಾರೆ.

ಡಾ. ಮೇಘ ಅವರು ಪ್ರಸ್ತುತ ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಅರಿವಳಿಕೆ ತಜ್ಞರಾಗಿ, ಅರಿವಳಿಕೆ ವಿಭಾಗದ ಮುಖ್ಯಸ್ಥರಾಗಿ ಹಾಗೂ ಎನ್.ಎಂ.ಸಿ. (NMC) ವಿಭಾಗದ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಬಿಡುವಿಲ್ಲದ ವೈದ್ಯಕೀಯ ವೃತ್ತಿಯ ನಡುವೆಯೂ ಹಗಲು-ರಾತ್ರಿ ಎನ್ನದೆ ಅಧ್ಯಯನದಲ್ಲಿ ತೊಡಗಿಸಿಕೊಂಡು ಈ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇತ್ತೀಚೆಗಷ್ಟೇ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕವಯಿತ್ರಿಯಾಗಿ ಪಾದಾರ್ಪಣೆ ಮಾಡಿರುವ ಇವರು, ಈಗ ತಾಂತ್ರಿಕ ಕ್ಷೇತ್ರದಲ್ಲೂ ಮಹತ್ತರ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ಎ ಐ ತಂತ್ರಜ್ಞಾನವು ರೋಗಗಳನ್ನು ಪತ್ತೆಹಚ್ಚುವಲ್ಲಿ ವಿನೂತನ ಮತ್ತು ಬಹುರೂಪದ ಸಹಾಯವನ್ನು ನೀಡುತ್ತದೆ. ಅಮೇರಿಕಾ ಮತ್ತು ಇಂಗ್ಲೆಂಡ್‌ನಂತಹ ಮುಂದುವರಿದ ದೇಶಗಳಲ್ಲಿ ಲಭ್ಯವಿರುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಭಾರತದಲ್ಲೂ ಅನುಷ್ಠಾನಗೊಳಿಸಲು ಈ ತಂತ್ರಜ್ಞಾನ ಸಹಕಾರಿ. ಎಐ ಬಳಕೆಯಿಂದ ದತ್ತಾಂಶ ನಮೂದು (Data Entry) ಮತ್ತು ವಿಶ್ಲೇಷಣೆಯ ಮೂಲಕ ಭವಿಷ್ಯದಲ್ಲಿ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಸಾಧ್ಯವಿದೆ. ಆರೋಗ್ಯ ಸೇವೆಗಳನ್ನು ಕಡಿಮೆ ವೆಚ್ಚದಲ್ಲಿ ಜನರಿಗೆ ತಲುಪಿಸಬಹುದಾಗಿದೆ. ಇದು ಮುಂದಿನ ಪೀಳಿಗೆಯ ವೈದ್ಯರಿಗೆ ಆರೋಗ್ಯ ಸೇವೆಯಲ್ಲಿ ಮಹತ್ತರ ಪಾತ್ರ ವಹಿಸಲು ಇನ್ಫಾರ್ಮೇಟಿವ್ ಆಗಿ ಕೆಲಸ ಮಾಡುತ್ತದೆ. ಇಂತಹ ತಂತ್ರಜ್ಞಾನದಲ್ಲಿ ಈಗ ಡಾ. ಮೇಘ ನೈಪುಣ್ಯತೆ ಗಳಿಸಿದ್ದಾರೆ.

ಡಾ. ಮೇಘ ಅವರ ಈ ಸಾಧನೆಯು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಹೆಚ್ಚಿನ ಕೀರ್ತಿಯನ್ನು ತಂದಿದೆ. ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ. ಬಿ. ವೈ. ಯುವರಾಜ್ ಅವರು ಡಾ. ಮೇಘ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಇವರ ಸಾಧನೆಯನ್ನು ಶ್ಲಾಘಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026