LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ

ನವದೆಹಲಿ : ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾರ ಅಧಿಕೃತ ನಿವಾಸದಲ್ಲಿ ನಡೆಯುತ್ತಿರುವ ‘ಜನ್​ ಸುನ್​​ವಾಯಿ ’ ಕಾರ್ಯಕ್ರಮದ ವೇಳೆ ಸಿಎಂ ರೇಖಾ ಮೇಲೆ  ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಿವಿಲ್ ಲೈನ್ಸ್‌ ಬಳಿಯಿರುವ ತಮ್ಮ ನಿವಾಸದಲ್ಲಿ ಜನ ಸಂದರ್ಶನ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. 30 ವರ್ಷದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೂರುದಾರನಂತೆ ಬಂದಿದ್ದ ವ್ಯಕ್ತಿಯೊಬ್ಬ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಮನವಿ ಕೊಡುವ ನೆಪದಲ್ಲಿ ಬಂದು ಏಕಾಏಕಿ ಕೂಗಾಡಿ, ಕಪಾಳಮೋಕ್ಷ ಮಾಡಿದ್ದಾನೆ. ಕೂಡಲೇ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ. ಇನ್ನೂ ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲಿನ ದಾಳಿಯನ್ನು ಮಾಜಿ ಸಿಎಂ ಅತಿಶಿ ಖಂಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಸಿಎಂ ಮೇಲಿನ ದಾಳಿ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ಮತ್ತು ಪ್ರತಿಭಟನೆಗೆ ಅವಕಾಶವಿದೆ. ಆದರೆ ಹಿಂಸಾಚಾರಕ್ಕೆ ಸ್ಥಳವಿಲ್ಲ. ದೆಹಲಿ ಪೊಲೀಸರು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಆಶಿಸುತ್ತೇನೆ ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026