Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಾಲಿನ ದರ ಹೆಚ್ಚಳಕ್ಕೆ ಆಗ್ರಹ : ಸದನದಲ್ಲಿ ಬಿಸಿ ಚರ್ಚೆ

ಬೆಂಗಳೂರು, ಸೆ. 24 : (ಸಮದರ್ಶಿ ಸುದ್ದಿ) - ರಾಜ್ಯದ ಬರ ಪರಿಸ್ಥಿತಿ ಕುರಿತು ವಿಧಾನಪರಿಷತ್ತಿನಲ್ಲಿ ಗುರುವಾರ ನಡೆದ ಚರ್ಚೆ ಹಾಲಿನ ದರ ಹೆಚ್ಚಳ, ಕೆಎಸ್ಸಾರ್ಟಿಸಿ ಆರ್ಥಿಕ ಸಂಕಷ್ಟ, ಸಹಕಾರ ಕ್ಷೇತ್ರಕ್ಕೆ ಸಾಲ ಸೌಲಭ್ಯ ಸೇರಿದಂತೆ ಹಲವು ವಿಷಯಗಳತ್ತ ತಿರುಗಿದ್ದು, ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದಕ್ಕೂ ಕಾರಣವಾಯಿತು. ಹಾಲು ಉತ್ಪಾದಕರಿಗೆ ಅನುಕೂಲವಾಗುವಂತೆ ದರ ಹೆಚ್ಚಿಸಬೇಕೆಂಬ ಬೇಡಿಕೆ ವಿಧಾನಮಂಡಲದ ಉಭಯ ಸದನಗಳಲ್ಲೂ ಕೇಳಿಬಂದಿದೆ.

ಕಾಂಗ್ರೆಸ್ ಸದಸ್ಯ ಎಸ್. ರವಿ ಮಾತನಾಡಿ, ಪಶು ಆಹಾರ ಸೇರಿದಂತೆ ಹೈನುಗಾರಿಕೆಯ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವುದರಿಂದ ಹಾಲಿನ ದರವನ್ನು ಪರಿಷ್ಕರಿಸುವುದು ಅನಿವಾರ್ಯವಾಗಿದೆ ಎಂದರು. ಪ್ರತಿ ಲೀಟರ್ ಹಾಲಿನ ದರವನ್ನು ₹12ರಿಂದ ₹15ರವರೆಗೆ ಹೆಚ್ಚಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ ಅವರು, ಇದರಿಂದ ದೊರೆಯುವ ಪ್ರಯೋಜನ ಹಾಲು ಉತ್ಪಾದಿಸುವ ರೈತರಿಗೆ ತಲುಪಬೇಕು ಎಂದು ಒತ್ತಾಯಿಸಿದರು.

ಹಾಲಿನ ದರ ಹೆಚ್ಚಳದ ವಿಷಯದಲ್ಲಿ ರಾಜಕೀಯ ಮಾಡಬಾರದು. ರೈತರು ಮತ್ತು ಹೈನುಗಾರರ ಹಿತದೃಷ್ಟಿಯಿಂದ ಆಡಳಿತ ಹಾಗೂ ಪ್ರತಿಪಕ್ಷಗಳು ಒಟ್ಟಾಗಿ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ರವಿ ಮನವಿ ಮಾಡಿದರು. ಇದಕ್ಕೆ ಪ್ರತಿಪಕ್ಷದ ಕೆಲವು ಸದಸ್ಯರೂ ರೈತರ ಪರವಾಗಿ ಸರ್ಕಾರವನ್ನು ಒತ್ತಾಯಿಸಲು ಸಿದ್ಧವಿರುವುದಾಗಿ ಪ್ರತಿಕ್ರಿಯಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹಾಲಿನ ದರ ಹೆಚ್ಚಿಸಬೇಕೆಂಬುದು ನಿಮ್ಮ ವಾದವಾಗಿದ್ದರೆ ಸರ್ಕಾರವನ್ನು ಒತ್ತಾಯಿಸಿ; ನೀವು ಆಡಳಿತ ಪಕ್ಷದಲ್ಲಿದ್ದೀರಿ, ರೈತರ ಪರವಾಗಿ ನಾವೂ ಇದ್ದೇವೆ ಎಂದು ಹೇಳಿದರು.

ಹಾಲಿನ ದರ ಪರಿಷ್ಕರಣೆ ಕುರಿತು ಮಾಧ್ಯಮಗಳಲ್ಲಿ ಕೇವಲ ‘ಬೆಲೆ ಏರಿಕೆ’ ಎಂಬ ರೀತಿಯಲ್ಲಿ ವರದಿಯಾದರೆ ಗ್ರಾಹಕರಲ್ಲಿ ಆತಂಕ ಉಂಟಾಗಬಹುದು ಎಂದ ರವಿ, ರೈತರು ಎದುರಿಸುತ್ತಿರುವ ಉತ್ಪಾದನಾ ವೆಚ್ಚ ಮತ್ತು ಸಂಕಷ್ಟವನ್ನೂ ಗಮನದಲ್ಲಿಟ್ಟುಕೊಂಡು ವಿಷಯವನ್ನು ನೋಡಬೇಕು ಎಂದು ಮನವಿ ಮಾಡಿದರು.

ನಂದಿನಿ ಬ್ರ್ಯಾಂಡ್ ಬೆಳೆಸುವಲ್ಲಿ ವರನಟ ಡಾ. ರಾಜಕುಮಾರ ಮತ್ತು ಅವರ ಕುಟುಂಬ ನೀಡಿದ ಕೊಡುಗೆಯನ್ನು ಸ್ಮರಿಸಿದ ಅವರು, ಯಾವುದೇ ಸಂಭಾವನೆ ಪಡೆಯದೆ ನಂದಿನಿ ಪರ ಪ್ರಚಾರ ಮಾಡಿದ್ದನ್ನು ಉಲ್ಲೇಖಿಸಿದರು. ನಂದಿನಿ ಹಾಗೂ ರಾಜ್ಯದ ಹೈನುಗಾರರ ಹಿತದೃಷ್ಟಿಯಿಂದ ಎಲ್ಲರೂ ಬೆಂಬಲ ನೀಡಬೇಕು ಎಂದರು.

ಲಡ್ಡು ವಿವಾದ ಪ್ರಸ್ತಾಪ: ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆಯ ಆರೋಪದ ವಿಷಯವನ್ನೂ ರವಿ ಸದನದಲ್ಲಿ ಪ್ರಸ್ತಾಪಿಸಿದರು. ತಿಮ್ಮಪ್ಪನ ಪ್ರಸಾದದ ಗುಣಮಟ್ಟದ ಕುರಿತು ಭಕ್ತರಲ್ಲಿ ಕಳವಳ ಉಂಟಾಗಿತ್ತು. ಪ್ರಸಾದದ ಗುಣಮಟ್ಟ ಕಾಪಾಡಲು ಆಂಧ್ರಪ್ರದೇಶ ಸರ್ಕಾರ ಕ್ರಮ ಕೈಗೊಂಡಿದ್ದು, ಗುಣಮಟ್ಟದ ತುಪ್ಪಕ್ಕಾಗಿ ಕರ್ನಾಟಕದ ನಂದಿನಿ ತುಪ್ಪವನ್ನು ಆಯ್ಕೆ ಮಾಡಿಕೊಂಡಿರುವುದು ರಾಜ್ಯದ ಹೈನುಗಾರಿಕೆ ಕ್ಷೇತ್ರದ ಹೆಮ್ಮೆಯ ಸಂಗತಿ ಎಂದರು.

ಸಹಕಾರ ಕ್ಷೇತ್ರಕ್ಕೆ ಸಾಲ ಹೆಚ್ಚಿಸಿ: ಸಹಕಾರ ಕ್ಷೇತ್ರಕ್ಕೆ ಸಾಲ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವನ್ನು ಬದಲಿಸಬೇಕು ಎಂದು ಆಗ್ರಹಿಸಿದ ರವಿ, ನಬಾರ್ಡ್ ಮೂಲಕ ಸಹಕಾರಿ ಸಂಸ್ಥೆಗಳಿಗೆ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಬೇಕು ಎಂದರು. ವಾಣಿಜ್ಯ ಬ್ಯಾಂಕುಗಳ ಮೇಲಿನ ಹೆಚ್ಚಿನ ಅವಲಂಬನೆಯಿಂದ ಸಹಕಾರ ಕ್ಷೇತ್ರ ಸಂಕಷ್ಟಕ್ಕೆ ಸಿಲುಕುತ್ತಿದೆ. ರೈತರ ಹಿತದೃಷ್ಟಿಯಿಂದ ನಬಾರ್ಡ್ ಮೂಲಕ ಸಾಲದ ಪ್ರಮಾಣ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಕೆಎಸ್ಸಾರ್ಟಿಸಿ ₹8 ಸಾವಿರ ಕೋಟಿ ನಷ್ಟದಲ್ಲಿ: ಹಾಲಿನ ದರದ ಚರ್ಚೆಯ ನಡುವೆಯೇ ಕೆಎಸ್ಸಾರ್ಟಿಸಿಯ ಆರ್ಥಿಕ ಪರಿಸ್ಥಿತಿಯೂ ಸದನದಲ್ಲಿ ಪ್ರಸ್ತಾಪವಾಯಿತು. ಸಾರಿಗೆ ಸಚಿವ ಬೈರತಿ ಸುರೇಶ ಮಾತನಾಡಿ, ಸಾರಿಗೆ ಸಂಸ್ಥೆ ಸುಮಾರು ₹8 ಸಾವಿರ ಕೋಟಿ ಆರ್ಥಿಕ ಸಂಕಷ್ಟದಲ್ಲಿದ್ದು, ಈಗಿರುವ ಸಿಬ್ಬಂದಿಗೆ ವೇತನ ನೀಡುವುದೇ ಕಷ್ಟವಾಗಿರುವ ಸಂದರ್ಭದಲ್ಲಿ ಹೊಸ ನೇಮಕಾತಿ ಮಾಡುವುದು ಸವಾಲಾಗಿದೆ ಎಂದು ತಿಳಿಸಿದರು.

ಡೀಸೆಲ್ ದರ ನಾಲ್ಕು ಬಾರಿ ಏರಿಕೆಯಾಗಿರುವುದರಿಂದ ಸಾರಿಗೆ ಸಂಸ್ಥೆಯ ಮೇಲಿನ ಆರ್ಥಿಕ ಹೊರೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಪರಿಷ್ಕರಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಪ್ರತಿಪಕ್ಷಗಳ ವಿರೋಧದ ಕಾರಣ ದರ ಹೆಚ್ಚಳ ಮಾಡಿಲ್ಲ ಎಂದು ಬೈರತಿ ಸುರೇಶ ಸದನಕ್ಕೆ ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ