Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಾಲಿನ ಪ್ರೋತ್ಸಾಹಧನ 10 ರೂ ಗೆ ಹೆಚ್ಚಿಸಲು ಒತ್ತಾಯ

ಚಿಕ್ಕನಾಯಕನಹಳ್ಳಿ: ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರತಿ ಲೀಟರ್‌ಗೆ 5 ರೂ ಪ್ರೋತ್ಸಾಹಧನವನ್ನು ರೂ 10ಕ್ಕೆ ಹೆಚ್ಚಿಸುವುದರ ಜೊತೆಗೆ ಹಾಲಿನ ಖರೀದಿ ದರವನ್ನೂ ಹೆಚ್ಚಿಸಬೇಕು ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಬುಳ್ಳೇನಹಳ್ಳಿ ಶಿವಪ್ರಕಾಶ್ ಒತ್ತಾಯಿಸಿದರು.

ತಾಲೂಕಿನ ಹೊನ್ನೇಬಾಗಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಹಮ್ಮಿಕೊಂಡಿದ್ದ ಗುಂಪು ರಾಸು ವಿಮಾ ಯೋಜನೆಯ ಉದ್ಘಾಟನೆ ಹಾಗೂ ರಾಸುಗಳ ಕಿವಿಗಳಿಗೆ ಓಲೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹೈನುಗಾರಿಕೆಯ ನಿರ್ವಹಣಾ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ ಇದೆ. ಹೀಗಾಗಿ ಹಾಲು ಉತ್ಪಾದಕರಿಗೆ ಸಮರ್ಪಕ ಬೆಲೆ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಎಂದರು.

ಹಾಲಿನ ದರ ಹಾಗೂ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯದ 17 ಹಾಲು ಒಕ್ಕೂಟಗಳ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನಿಂದ ಸುಮಾರು 1,200 ಹಾಲು ಉತ್ಪಾದಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಮುಖ್ಯಮಂತ್ರಿ ಅವರು ಪ್ರತಿಭಟನಾನಿರತ ಹಾಲು ಉತ್ಪಾದಕರೊಂದಿಗೆ ಮಾತುಕತೆ ನಡೆಸಿ ಅವರ ಬೇಡಿಕೆಗಳನ್ನು ಆಲಿಸಬೇಕು ಎಂದು ಶಿವಪ್ರಕಾಶ್ ಒತ್ತಾಯಿಸಿದರು.

20 ಸಾವಿರ ರಾಸುಗಳಿಗೆ ವಿಮೆ ಗುರಿ

ತಾಲೂಕಿನಲ್ಲಿ 20 ಸಾವಿರ ರಾಸುಗಳಿಗೆ ಗುಂಪು ವಿಮೆ ಮಾಡಿಸುವ ಗುರಿ ಹೊಂದಲಾಗಿದೆ. ರಾಸುಗಳ ಸಾಮರ್ಥ್ಯಕ್ಕೆ ಅನುಗುಣವಾಗಿ 10 ಸಾವಿರದಿಂದ 75 ಸಾವಿರದವರೆಗೆ ವಿಮಾ ಸೌಲಭ್ಯ ಕಲ್ಪಿಸಲಾಗುತ್ತಿದೆ. ಕಳೆದ ವರ್ಷ 18,632 ರಾಸುಗಳು ವಿಮಾ ಸೌಲಭ್ಯ ಪಡೆದಿದ್ದು, 282 ರಾಸುಗಳು ಮೃತಪಟ್ಟ ಹಿನ್ನೆಲೆಯಲ್ಲಿ ರೈತರಿಗೆ ಸುಮಾರು 1.90 ಕೋಟಿ ಪರಿಹಾರ ನೀಡಲಾಗಿದೆ ಎಂದು ಅವರು ತಿಳಿಸಿದರು.
ಗುಂಪು ರಾಸು ವಿಮಾ ಯೋಜನೆಯಲ್ಲಿ ಹಾಲು ಉತ್ಪಾದಕರು ಶೇ.30ರಷ್ಟು ಮೊತ್ತವನ್ನು ಭರಿಸಿದರೆ, ತುಮಕೂರು ಹಾಲು ಒಕ್ಕೂಟ ಶೇ.50 ಹಾಗೂ ತುಮುಲ್ ಟ್ರಸ್ಟ್ ಶೇ.20ರಷ್ಟು ಮೊತ್ತವನ್ನು ಭರಿಸುತ್ತದೆ. ಕೆಲವು ಆರ್ಥಿಕವಾಗಿ ಸದೃಢವಾಗಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರ ಶೇ.30ರ ಪಾಲಿನ ವೆಚ್ಚವನ್ನೂ ಭರಿಸುತ್ತಿವೆ ಎಂದರು.

ತುಮುಲ್ ಟ್ರಸ್ಟ್‌ನಿಂದ ವಿವಿಧ ಸವಲತ್ತು: ತುಮುಲ್ ಟ್ರಸ್ಟ್ ಮೂಲಕ ಹಾಲು ಉತ್ಪಾದಕರು ಮೃತಪಟ್ಟಲ್ಲಿ 50 ಸಾವಿರ ನೆರವು, ಹುಲ್ಲಿನ ಬಣವೆಗೆ ಬೆಂಕಿ ಬಿದ್ದರೆ 15 ಸಾವಿರ ಪರಿಹಾರ ನೀಡಲಾಗುತ್ತಿದೆ. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಚಿಕ್ಕನಾಯಕನಹಳ್ಳಿ ತಾಲೂಕಿನ 10 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.


ಹಾಲು ಉತ್ಪಾದಕರಿಗೆ ಶಸ್ತ್ರಚಿಕಿತ್ಸೆ ಅಗತ್ಯವಾದಲ್ಲಿ 25 ಸಾವಿರದವರೆಗೆ ವೈದ್ಯಕೀಯ ವೆಚ್ಚ ಭರಿಸಲಾಗುವುದು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 2 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಶಿವಪ್ರಕಾಶ್ ವಿವರಿಸಿದರು.
ಕಾರ್ಯಕ್ರಮದಲ್ಲಿ ಹೊನ್ನೇಬಾಗಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಯತೀಶ್, ಕಾರ್ಯದರ್ಶಿ ಬಸವರಾಜು, ತುಮುಲ್ ಪಶುವೈದ್ಯ ಸಿದ್ದುಗೌಡ, ತಾಲ್ಲೂಕು ಮುಖ್ಯಸ್ಥ ಮೋಹನಕುಮಾರ ಹಾಗೂ  ಇತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST