LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣ ಇಲಾಖೆ- ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಬೆಂಗಳೂರು:  ಬೆಂಗಳೂರು ರೋಟರಿ ಕ್ಲಬ್‌ (RCB) ಶಾಲಾ ಶಿಕ್ಷಣ ಇಲಾಖೆಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಿಗೆ ಮೇಜು-ಬೆಂಚುಗಳ ಜೊತೆಗೆ ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳನ್ನು ಒದಗಿಸಲು ಇಂದು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪನವರ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ ಹಾಕಿದರು.

ರೋಟರಿ ಇಂಟರಾಕ್ಟಿವ್ ಲರ್ನಿಂಗ್ 2025-26” ಹೆಸರಿನ ಈ ಯೋಜನೆಯಡಿ, ರೋಟರಿ ಕ್ಲಬ್ ತನ್ನ ಟ್ರಸ್ಟ್‌ ಮುಖಾಂತರ ರಾಜ್ಯದ 100 ಸರ್ಕಾರಿ ಶಾಲಾ ತರಗತಿಗಳಿಗೆ ಬೆಂಚು-ಮೇಜುಗಳ ಜೊತೆಗೆ 75 ಇಂಚಿನ ಇಂಟರಾಕ್ಟಿವ್‌ ಬೋರ್ಡ್‌ಗಳನ್ನು ಯುಪಿಎಸ್‌ ಸೌಲಭ್ಯ ಸಹಿತ ಒದಗಿಸಲಿದೆ. ಸುಮಾರು ₹3.5 ಕೋಟಿ ವೆಚ್ಚದಲ್ಲಿ ಜಾರಿಗೊಳ್ಳುವ ಈ ಯೋಜನೆ 2026ರ ಜೂನ್ 30ರೊಳಗೆ ಪೂರ್ಣಗೊಳ್ಳುವ ಗುರಿ ಹೊಂದಿದೆ. ಹೆಚ್ಚುವರಿ CSR ನೆರವು ದೊರೆತರೆ, 2026-27ರಲ್ಲಿ ಇನ್ನಷ್ಟು ತರಗತಿಗಳನ್ನು ಈ ಯೋಜನೆಯ ವ್ಯಾಪ್ತಿಗೆ ತರಲಾಗುವುದು.

ಒಡಂಬಡಿಕೆಗೆ ಸಹಿ ಹಾಕಿದ ನಂತರ ಮಾತನಾಡಿದ ರೋಟರಿ ಕ್ಲಬ್ ಅಧ್ಯಕ್ಷ ಸುಖೇನ್ ಅವರು, ಕನಿಷ್ಠ 1,000 ಮೇಜು-ಬೆಂಚುಗಳು ಮತ್ತು ಸ್ಮಾರ್ಟ್‌ ಬೋರ್ಡ್‌ಗಳನ್ನು ಸರ್ಕಾರಿ ಶಾಲೆಗಳಲ್ಲಿ ಒದಗಿಸುವ ಉದ್ದೇಶವನ್ನು ಕ್ಲಬ್ ಹೊಂದಿದೆ ಎಂದು ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಈ ಸಹಯೋಗವನ್ನು ಸ್ವಾಗತಿಸಿ, “ಸಾರ್ವಜನಿಕ ಶಿಕ್ಷಣ ಬಲಪಡಿಸಲು ಇದು ಮಹತ್ವದ ಹೆಜ್ಜೆ” ಎಂದರು. ಇಲಾಖೆಯ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮವು ಈಗಾಗಲೇ ಹಳೆಯ ವಿಧ್ಯಾರ್ಥಿಗಳು ಹಾಗೂ ಸಮುದಾಯದ ಬೆಂಬಲವನ್ನು ಪಡೆದುಕೊಂಡಿದೆ. ರೋಟರಿಯ ಈ ಪಾಲ್ಗೊಳ್ಳುವಿಕೆಯಿಂದ ಶಾಲೆಗಳ ಮೂಲಸೌಕರ್ಯವನ್ನು ಬಲಪಡಿಸುವಲ್ಲಿ ಹೆಚ್ಚಿನ ಸಮುದಾಯ ಪಾಲ್ಗೊಳ್ಳುವಿಕೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ. ಕೆ.ವಿ. ತ್ರಿಲೋಕ್‌ ಚಂದ್ರ, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕಿ ಶ್ರೀಮತಿ ವಿದ್ಯಾ ಕುಮಾರಿ, ರೋಟರಿ ಜಿಲ್ಲಾ ಗವರ್ನರ್ ಎಲಿಜಬೆತ್‌ ಚೆರಿಯನ್ ಹಾಗೂ ಹಿರಿಯ ಅಧಿಕಾರಿಗಳು ಮತ್ತು ರೋಟರಿಯನ್‌ಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ