Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಚಿವರ ಸಮ್ಮುಖದಲ್ಲಿ ಶಾಸಕ ರಾಜಾ ವೇಣುಗೋಪಾಲ ನಾಯಕರಿಂದ ಅಭಿವೃದ್ಧಿ ಮಂತ್ರ

ಸುರಪುರದ ವಿಕಾಸಕ್ಕೆ ಬೆಂಗಳೂರಿನಲ್ಲಿ ‘ಬ್ಲೂಪ್ರಿಂಟ್’


ಸಚಿವರ ಸಮ್ಮುಖದಲ್ಲಿ ಶಾಸಕ ರಾಜಾ ವೇಣುಗೋಪಾಲ ನಾಯಕರಿಂದ ಅಭಿವೃದ್ಧಿ ಮಂತ್ರ


ಬೆಂಗಳೂರು: ಸುರಪುರ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ರೂಪಿಸುವ ದೃಢ ಸಂಕಲ್ಪದೊಂದಿಗೆ, ಜನಪ್ರಿಯ ಶಾಸಕ ರಾಜಾ ವೇಣುಗೋಪಾಲ ನಾಯಕರು ಇಂದು ಬೆಂಗಳೂರುದಲ್ಲಿ ಐಟಿ–ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಮಹತ್ವದ ಅಭಿವೃದ್ಧಿ ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.


ಈ ಭೇಟಿಯು ಕೇವಲ ಸೌಜನ್ಯ ಸಭೆಗೆ ಸೀಮಿತವಾಗದೇ, ಸುರಪುರ ಕ್ಷೇತ್ರದ ಗ್ರಾಮೀಣ ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದ ಸ್ಪಷ್ಟ ಮತ್ತು ಪಕ್ಕಾ ಯೋಜನೆಗಳ ಬ್ಲೂಪ್ರಿಂಟ್‌ನೊಂದಿಗೆ ನಡೆದದ್ದು ವಿಶೇಷವಾಗಿತ್ತು. ಕ್ಷೇತ್ರದ ಜನರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳು, ಅಗತ್ಯ ಸೌಲಭ್ಯಗಳ ಕೊರತೆ, ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ಸಚಿವರ ಗಮನ ಸೆಳೆದರು.


ಐಟಿ–ಬಿಟಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಸುರಪುರ ಕ್ಷೇತ್ರಕ್ಕೆ ಲಭ್ಯವಾಗಬೇಕಾದ ಸೌಲಭ್ಯಗಳು, ಯುವಕರಿಗೆ ಉದ್ಯೋಗಾವಕಾಶಗಳು, ಡಿಜಿಟಲ್ ಮೂಲಸೌಕರ್ಯ, ರಸ್ತೆ–ಚರಂಡಿ–ನೀರಾವರಿ ವ್ಯವಸ್ಥೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಬಲವರ್ಧನೆ ಕುರಿತು ಸಮಗ್ರ ಚರ್ಚೆ ನಡೆಯಿತು. ಸರ್ಕಾರದ ವಿವಿಧ ಯೋಜನೆಗಳನ್ನು ಕ್ಷೇತ್ರದ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಮನ್ವಯ ಕಾರ್ಯವೈಖರಿಯ ಅಗತ್ಯವಿದೆ ಎಂಬುದರ ಮೇಲೂ ಒತ್ತಡ ನೀಡಲಾಯಿತು.


ಈ ಕುರಿತು ಮಾತನಾಡಿದ ಶಾಸಕ ರಾಜಾ ವೇಣುಗೋಪಾಲ ನಾಯಕರು,



“ಸುರಪುರದಲ್ಲಿ ಏಕಪಕ್ಷೀಯ ಆಡಳಿತಕ್ಕೆ ಅವಕಾಶ ಇಲ್ಲ. ಎಲ್ಲಾ ಹಿರಿಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಸಮಾನವಾಗಿ ಪರಿಗಣಿಸಿ ಅಭಿವೃದ್ಧಿ ಕಾರ್ಯಗಳನ್ನು ಆರಂಭಿಸಿದ್ದೇವೆ. ಪ್ರತಿಪಕ್ಷಗಳ ಅಭಿಪ್ರಾಯಗಳಿಗೂ ಮನ್ನಣೆ ನೀಡುವುದು ನಮ್ಮ ರಾಜಕೀಯ ಸಂಸ್ಕೃತಿ. ಗ್ರಾಮೀಣ ಮತ್ತು ನಗರ ಪ್ರದೇಶಗಳ ಅನೇಕ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ನಮ್ಮ ಆದ್ಯತೆ. ಜನರ ಮನಸ್ಸು ಗೆದ್ದರೆ ಅಧಿಕಾರ ದೊಡ್ಡ ಪ್ರಶ್ನೆಯಲ್ಲ. ನನ್ನ ಗುರಿ ಸುರಪುರದ ಸಮಗ್ರ ಮತ್ತು ಸತತ ಅಭಿವೃದ್ಧಿ” ಎಂದು ಸ್ಪಷ್ಟಪಡಿಸಿದರು.


ಈ ಮಹತ್ವದ ಭೇಟಿಯಿಂದ ಸುರಪುರ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಹೊಸ ಚೈತನ್ಯ ಮೂಡಿಸುವ ನಿರೀಕ್ಷೆ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗಲಿದೆ ಎಂಬ ವಿಶ್ವಾಸ ಜನರಲ್ಲಿ ಮೂಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ