Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿ, ಜನರಿಗೆ ಪರ್ಯಾಯ ವ್ಯವಸ್ಥೆ: ಡಿಸಿಎಂ ಡಿ.ಕೆ. ಶಿವಕುಮಾರ್

 

ಮಾಗಡಿ:
"ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಈ ಗ್ರಾಮದ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮಾಗಡಿಯ ಕೆಂಪೇಗೌಡ ಕೋಟೆ, ಸಮಾಧಿ ಸ್ಥಳದ ಅಭಿವೃದ್ಧಿ ಕುರಿತ ಪ್ರಾತ್ಯಕ್ಷಿಕೆ ವೀಕ್ಷಣೆ ನಂತರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

"ನಾವು ಈ ಹಿಂದೆ ಕೆಂಪೇಗೌಡ ಪ್ರಾಧಿಕಾರ ಸ್ಥಾಪನೆ ಮಾಡಿದ್ದೆವು. ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿ ಮಾಡಲು, ಈ ಊರಿನ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ಮಾತು ನೀಡಿದ್ದೆವು.

ಸ್ಥಳಾಂತರಕ್ಕೆ ಜಮೀನಿನ ವ್ಯವಸ್ಥೆ ಆಗಿದ್ದು, ಇದಕ್ಕೆ ಎಲ್ಲರ ಸಹಕಾರ ಸಿಕ್ಕಿದೆ ಎಂದು ಕೇಳಿ ಸಂತೋಷವಾಗಿದೆ. ಪ್ರತಿಯೊಬ್ಬರಿಗೂ ದಾಖಲೆಗಳ ಸಮೇತ ನಿವೇಶನ ನೀಡಬೇಕು, ಅವರ ಬದುಕಿಗೆ ಅನುಕೂಲ ಆಗುವ ವ್ಯವಸ್ಥೆ ಕಲ್ಪಿಸಲು ಶಾಸಕ ಬಾಲಕೃಷ್ಣ ಅವರಿಗೆ ತಿಳಿಸಿದ್ದೇನೆ.

ಈ ಭಾಗದ ಅಭಿವೃದ್ಧಿಗೆ ಅಕ್ಕಪಕ್ಕದ 7-8 ಎಕರೆ ಜಮೀನು ಬೇಕಿದ್ದು, ಇದಕ್ಕೆ ಬದಲಿ ಜಮೀನು ನೀಡಲಾಗುವುದು. ಇದನ್ನು ಐತಿಹಾಸಿಕ ಹಾಗೂ ಪವಿತ್ರ ಕ್ಷೇತ್ರವಾಗಿ ಮಾಡಬೇಕು. ಇದು ದೇಶದ ಆಸ್ತಿ. ಇದಕ್ಕಾಗಿ ನೀವು ಸಹಕಾರ ನೀಡಬೇಕು.

ಕೆಂಪೇಗೌಡರ ಜನ್ಮಸ್ಥಳ ಹಾಗೂ ಐಕ್ಯಸ್ಥಳ, ಶ್ರೀ ಶಿವಕುಮಾರಸ್ವಾಮಿಗಳ ಜನ್ಮಸ್ಥಳ, ಶ್ರೀ ಬಾಲಗಂಗಾಧರನಾಥ ಸ್ವಾಮಿಗಳ ಜನ್ಮಸ್ಥಳ ಮಾಗಡಿ ಕ್ಷೇತ್ರದಲ್ಲಿರುವುದು ವಿಶೇಷ. ಈ ಕ್ಷೇತ್ರಗಳ ಅಭಿವೃದ್ಧಿಗೆ ನಿಮ್ಮ ಸಹಕಾರ ಇರಲಿ" ಎಂದು ತಿಳಿಸಿದರು.

ಇದಕ್ಕೂ ಮುನ್ನ ಕುದೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಲಿಂಗಾಯತರ ಅಸಮಾಧಾನದ ಬಗ್ಗೆ ಸಭೆ ನಡೆಯುತ್ತಿರುವ ಬಗ್ಗೆ ಕೇಳಿದಾಗ, "ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕೆಲವು ಅಧಿಕಾರಿಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎಲ್ಲಾ ಪಕ್ಷಗಳು ಅವರದೇ ಆದ ರಾಜಕಾರಣ ಮಾಡಲು ಹೊರಟಿವೆ. ರಾಜ್ಯದ ಎಲ್ಲಾ ಜಾತಿ, ಸಮುದಾಯದವರು ನಮಗೆ ಮತ ಹಾಕಿ ಜನರ ಸೇವೆ ಮಾಡಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನಾವು ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ" ಎಂದು ತಿಳಿಸಿದರು.

ಪಂಚಾಯ್ತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯುವ ವಿಚಾರವಾಗಿ ಸಿಎಂ ಸ್ಪಷ್ಟನೆ ಕುರಿತು ಕೇಳಿದಾಗ, "ಇದು ಆರ್ಥಿಕ ಇಲಾಖೆ ನಿರ್ಧಾರ. ಕಳೆದ 30 ವರ್ಷಗಳಿಂದ ಯಾವುದೇ ಹೊಸ ಅಂಗಡಿಗಳಿಗೆ ಅನುಮತಿ ನೀಡಿಲ್ಲ. ಅನೇಕರು ಪರವಾನಗೆಯನ್ನು 4-5 ಕೋಟಿಗೆ ಮಾರುತ್ತಿದ್ದಾರೆ. ಹೆಚ್ಚಿನ ಜನರಿಗೆ ಉದ್ಯೋಗ ಸೃಷ್ಟಿ ಮಾಡಬೇಕು. ಎಲ್ಲಿ ಮದ್ಯದ ಅಂಗಡಿ ತೆರೆಯಬೇಕು ಎಂದು ಚರ್ಚೆ ಮಾಡುತ್ತೇವೆ. ಹಾಗೆಂದು ಹಳ್ಳಿ, ಹಳ್ಳಿಗಳಲ್ಲಿ ಮಾಡುವುದಿಲ್ಲ. ಕುಡಿತ ತಪ್ಪಿಸಲು ಆಗುವುದಿಲ್ಲ. ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಎಲ್ಲರ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಮಾಡುತ್ತಾರೆ" ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ