LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ



ಚಿತ್ರದುರ್ಗಜೂ.23:

ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಿತರಿಸಿದರು.

ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಈಚೆಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 14 ಮಂದಿ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಿಸಲಾಯಿತು.

2024-25ನೇ ಸಾಲಿನಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಪಿಟ್ಮೆಂಟ್) ಯೋಜನೆಯಡಿ ದೈಹಿಕ ವಿಕಲಚೇತನರಿಗೆ 2 ಯಂತ್ರಚಾಲಿತ ದ್ವಿಚಕ್ರ ವಾಹನ, ಬ್ಯಾಟರಿಚಾಲಿತ ವೀಲ್ಚೇರ್ ಯೋಜನೆಯಡಿ 1 ಬ್ಯಾಟರಿ ಚಾಲಿತ ವೀಲ್ಚೇರ್, ಎಸ್ಎಸ್ಎಲ್ಸಿ ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆಯಡಿ 8 ಟಾಕಿಂಗ್ ಲ್ಯಾಪ್ಟಾಪ್ ಹಾಗೂ ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳ ಯೋಜನೆಯಡಿ 3 ಮಂದಿ ವಿಕಲಚೇತನರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಎಂಆರ್ಡಬ್ಲ್ಯೂ ಮೈಲಾರಪ್ಪ ಸೇರಿದಂತೆ ವಿಕಲಚೇತನ ಫಲಾನುಭವಿಗಳು ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು