Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಧರ್ಮಪುರ ಬಸ್ ನಿಲ್ದಾಣ ನಿರ್ಮಾಣ: ಸಚಿವ ರಾಮಲಿಂಗಾರೆಡ್ಡಿ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನ ಧರ್ಮಪುರದಲ್ಲಿ ರೂ.3.5 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶೀಘ್ರ ಮಂಜೂರಾತಿ ನೀಡುವುದಾಗಿ ಸಾರಿಗೆ ಹಾಗೂ ಮುಂಜರಾಯಿ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದರು.
ಶನಿವಾರ ಹಿರಿಯೂರು ನಗರದ ಹುಳಿಯಾರು ರಸ್ತೆಯಲ್ಲಿ 06 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಹಿರಿಯೂರು ಬಸ್ ಘಟಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.


ಕಳೆದ 2017 ರಲ್ಲಿ ಸಾರಿಗೆ ಸಚಿವನಾಗಿದ್ದಾಗ ದಾವಣಗೆರೆ ಹಾಗೂ ತುಮಕೂರು ವಿಭಾಗದಲ್ಲಿದ್ದ ಚಿತ್ರದುರ್ಗವನ್ನು ಪ್ರತ್ಯೇಕ ವಿಭಾಗವನ್ನಾಗಿ ಪ್ರಾರಂಭಿಸಲು ಅನುಮತಿ ನೀಡಿದ್ದೆ. ಅದರಂತೆ ಚಿತ್ರದುರ್ಗ ವಿಭಾಗವು 2018 ರಿಂದ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಬಸ್ ಘಟಕಗಳನ್ನು ನಿರ್ಮಿಸಲಾಗುತ್ತಿದೆ.

ಮೊಳಕಾಲ್ಮೂರು ಹಾಗೂ ಹೊಳಲ್ಕೆರೆ ನೂತನ ಬಸ್ ಘಟಕಗಳ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ. ಈ ಘಟಕಗಳಲ್ಲಿ ಡೀಸೆಲ್ ಪಂಪ್ ನಿರ್ಮಿಸಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ. ಇನ್ನೂ ಎರಡು ತಿಂಗಳಲ್ಲಿ ಬಸ್ ಘಟಕ ನಿರ್ಮಾಣದ ಅಂತಿಮ ಕೆಲಸಗಳನ್ನು ಪೂರ್ಣಗೊಳಿಸಿ ಉದ್ಘಾಟಿಸುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.


ಹಿರಿಯೂರು ಬಸ್ ನಿಲ್ದಾಣ ಹಳೆಯದಾಗಿದ್ದು ಉನ್ನತೀಕರಿಸಲು ರೈತ ಮುಖಂಡರು ಮನವಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಹಿರಿಯೂರು ಬಸ್ ನಿಲ್ದಾಣ ಉನ್ನತೀಕರಣಕ್ಕೂ ಮಂಜೂರಾತಿ ನೀಡಲಾಗುವುದು. ಸದ್ಯ ಉದ್ಘಾಟಿಸಿರುವ ಹಿರಿಯೂರು ನೂತನ ಬಸ್ ಘಟಕದಲ್ಲಿ ಆಡಳಿತ ಕಚೇರಿ, ಬಸ್‍ಗಳ ನಿರ್ವಹಣೆ ಮತ್ತು ಪರಿವೀಕ್ಷಣೆ ಅಂಕಣ, ಭದ್ರತಾ ಮತ್ತು ಸಂಚಾರ ಶಾಖೆ, ಮಹಿಳಾ ಮತ್ತು ಪುರುಷ ಸಿಬ್ಬಂದಿ ವಿಶ್ರಾಂತಿ ಗೃಹ,

ಇಂಧನ ಪಂಪ್, ವಾಷಿಂಗ್ ರ್ಯಾಂಪ್, ಪಾರ್ಕಿಂಗ್ ವ್ಯವಸ್ಥೆ, ಜನರೇಟರ್ ಕೊಠಡಿ, ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಚಿತ್ರದುರ್ಗ ವಿಭಾಗದಲ್ಲಿ 358 ಬಸ್‍ಗಳು ಇದ್ದು, 924 ಚಾಲನಾ, 225 ತಾಂತ್ರಿಕ ಹಾಗೂ 194 ಆಡಳಿತ ಸೇರಿ 1343 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.


ಶಕ್ತಿ ಯೋಜನೆ ಜಾರಿಯಿಂದ ಇಲ್ಲಿಯವರಗೆ ಚಿತ್ರದುರ್ಗ ವಿಭಾಗದ ಬಸ್‍ಗಳಲ್ಲಿ 5.48 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಸಿದ್ದಾರೆ. ಪ್ರತಿ ದಿನ ರಾಜ್ಯ ಸಾರಿಗೆ ಬಸ್‍ಗಳಲ್ಲಿ 55 ರಿಂದ 60 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದು, ಇಲ್ಲಿಯವರೆಗೆ ಒಟ್ಟು 512 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆಯ ಲಾಭ ಪಡೆದಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.  

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ