LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ…!

ಮಂಗಳೂರು : ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣಕ್ಕೆ ಮರು ಜೀವ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಕೆಯ ತಾಯಿ ಇಂದು ಸಂಜೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿಯಾದರು.

ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದರು.

ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದವರು ನಿಗೂಢವಾಗಿ ನಾಪತ್ತೆಯಾಗಿದ್ದರು.

ಧರ್ಮಸ್ಥಳದಲ್ಲಿ ಒತ್ತಡದಿಂದ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದ. ಪತ್ರ ಬರೆದ ಕೆಲವೇ ದಿನಗಳ ಬಳಿಕ ಅದೇ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹೇಳಿಕೆಯನ್ನೂ ನೀಡಿದ್ದ.

ಬರುವಾಗ ತನ್ನ ಜೊತೆ ಅಸ್ತಿಪಂಜರವೊಂದನ್ನು ತಂದಿದ್ದು, ಅದನ್ನು ಪೊಲೀಸರು ವಿಧಿ ವಿಜ್ಞಾನ ತನಿಖೆಗೆ ಒಳಪಡಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತ ಬಹಳಷ್ಟು ಕಡೆಗಳಲ್ಲಿ ತಾನು ಶವಗಳನ್ನು ಹೂತು ಹಾಕಿರುವುದಾಗಿಯು, ಪೊಲೀಸರು ತನಿಖೆ ನಡೆಸುವುದಾದರೆ ಆ ಸ್ಥಳಗಳನ್ನು ತೋರಿಸುವುದಾಗಿ ಆ ವ್ಯಕ್ತಿ ತಿಳಿಸಿದ್ದ. ಈಗ ಆ ವ್ಯಕ್ತಿಯನ್ನು ಪ್ರತಿನಿಧಿಸುವ ಇಬ್ಬರು ನ್ಯಾಯವಾದಿಗಳು ಎಸ್ ಐ ಟಿ ರಚನೆ ಬಗ್ಗೆ ಬೇಡಿಕೆ ಮುಂದಿಟ್ಟಿದ್ದಾರೆ.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆಗಳು ಹಾಗು ಅವುಗಳನ್ನು ಒತ್ತಡದಿಂದಾಗಿ ತಾನೇ ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿರುವುದು ಈಗ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸಂಚಲನ ಮೂಡಿಸಿದೆ.

ಅದೇ ಹೊತ್ತಿಗೆ ಸುಜಾತಾ ಭಟ್ ಅವರು ತಮ್ಮ ಮಗಳೂ ಅಲ್ಲೇ ಕಾಣೆಯಾಗಿದ್ದಾಳೆ ಎಂದು ದೂರು ಸಲ್ಲಿಸಲು ಬಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026