LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧರ್ಮಸ್ಥಳ: ಪದ್ಮಲತಾ ಅತ್ಯಾಚಾರ-ಹತ್ಯೆ ಪ್ರಕರಣ: ಮರುತನಿಖೆಗೆ ಆಗ್ರಹಿಸಿ ಎಸ್ಐಟಿಗೆ ದೂರು ನೀಡಲು ಆಗಮಿಸಿದ ಮೃತಳ ಸಹೋದರಿ

ಧರ್ಮಸ್ಥಳ ಗ್ರಾಮದಲ್ಲಿ ಮೂರು ದಶಕಗಳಿಗೂ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಪದ್ಮಲತಾ ಅವರ ಸಹೋದರಿ ಸೋಮವಾರ ಪದ್ಮಲತಾ ಪ್ರಕರಣದ ಬಗ್ಗೆ ಮರುತನಿಖೆ ನಡೆಸುವಂತೆ ದೂರು ನೀಡಲು ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಸೋಮವಾರ ಆಗಮಿಸಿದ್ದಾರೆ.

ಪದ್ಮಲತಾ ಅವರ ಸಹೋದರಿ ಇಂದ್ರಾವತಿ ಅವರು ಸಿಪಿಎಂ ಪಕ್ಷದ ಮುಖಂಡ ಬಿ.ಎಂ.ಭಟ್‌ ಹಾಗೂ ಇತರರೊಂದಿಗೆ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

ಎಸ್‌ಐಟಿ ಠಾಣೆಗೆ ತಂಡದ ಹಿರಿಯ ಅಧಿಕಾರಿಗಳು ಆಗಮಿಸಿದ ಬಳಿಕ ಅವರಿಗೆ ದೂರು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸುಮಾರು 39 ವರ್ಷಗಳ ಹಿಂದೆ ಅಂದರೆ 1986ರಲ್ಲಿ ಬೋಳಿಯಾರು ನಿವಾಸಿ ಪದ್ಮಲತಾ ಅವರನ್ನು ಅತ್ಯಾಚಾರಗೈದು ಕೊಲೆಗೈಯಲಾಗಿತ್ತು.

ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ಸಾಕ್ಷಿ ದೂರುದಾರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ತನಿಖೆಗೆ ಎಸ್.ಐ.ಟಿ. ರಚಿಸಲಾಗಿದ್ದು, ತನಿಖೆ ನಡೆಸುತ್ತಿದೆ. ಈ ಮಧ್ಯೆ ಬೆಳ್ತಂಗಡಿಯಲ್ಲಿ ಎಸ್‌ಐಟಿ ಕಚೇರಿ ತೆರೆಯಲಾಗಿದ್ದು, ಅದಕ್ಕೆ ಠಾಣೆಯ ಸ್ಥಾನಮಾನ ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026